spot_img
Sunday, May 17, 2026
spot_img

ಕೊಲ್ಲೂರಿಗೆ ತೆರಳುತ್ತಿದ್ಧ ಖಾಸಗಿ ಬಸ್‌, ಪಿಕ್‌ ಅಪ್‌ ವಾಹನ ಮುಖಾಮುಖಿ ಡಿಕ್ಕಿ | ಬಸ್‌ ಪಲ್ಟಿ, ಐವರಿಗೆ ಗಾಯ !

ಜನಪ್ರತಿನಿಧಿ (ಕೊಲ್ಲೂರು) : ಕುಂದಾಪುರದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು, ಕೊಲ್ಲೂರಿನಿಂದ ಕುಂದಾಪುರದ ಕಡೆಗೆ ಬರುತ್ತಿದ್ದ ಪಿಕ್‌ ಅಪ್‌ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸು ಪಲ್ಟಿಯಾಗಿರುವ ಘಟನೆ ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಇಡೂರು ಕುಂಙಾಡಿ ಬಳಿಯ ಜನ್ನಾಲ್‌ ಎಂಬಲ್ಲಿ ನಡೆದಿದೆ.

ಬಸ್ಸಿನಲ್ಲಿ ಸುಮಾರು ಮೂವತ್ತಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರೆಂದು ಹೇಳಲಾಗಿದ್ದು, ಕೊಲ್ಲೂರು ಕಡೆಯಿಂದ ಬರುತ್ತಿದ್ದ ಮೆಣಸು ಸಾಗಿಸುತ್ತಿದ್ದ ಪಿಕ್‌ ಅಪ್‌ ವಾಹನ, ಕುಂದಾಪುರದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಗೆ ಡಿಕ್ಕಿಯಾಗಿದೆ, ಪರಿಣಾಮ ಬಸ್ಸಿನ ಐವರು ಪ್ರಯಾಣಿಕರನ್ನು ಸೇರಿದಂತೆ, ಬಸ್ಸಿನ ಚಾಲಕ, ನಿರ್ವಾಹಕ, ಪಿಕ್‌ ಅಪ್‌ ವಾಹನ ಚಾಲಕ ನಿರ್ವಾಹಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಅಪಘಾತದ ಪರಿಣಾಮ ಪಿಕ್‌ ಅಪ್‌ ವಾಹನ ಹಾಗೂ ಬಸ್ಸು ಜಖಂ ಗೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!