Sunday, October 13, 2024

ಕೃಷಿ ಪಂಡಿತ ಪ್ರಶಸ್ತಿ : ಅರ್ಜಿ ಆಹ್ವಾನ

ಜನಪ್ರತಿನಿಧಿ (ಮಾಹಿತಿ) : ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಸೆಪ್ಟೆಂಬರ್ 30ರ ಒಳಗಾಗಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!