Saturday, October 12, 2024

ಪ. ಬಂಗಾಳ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ : ವಿಚಾರಣೆ ವೇಳೆ ಸುಳ್ಳು ದಾಖಲೆ ಸೃಷ್ಟಿಸಿದ್ದ ಬಗ್ಗೆ ಬಯಲು : ಸಿಬಿಐ

ಜನಪ್ರತಿನಿಧಿ (ನವ ದೆಹಲಿ) : ಪಶ್ಚಿಮ ಬಂಗಾಳದ ಕೊಲ್ಕತ್ತಾದ ಆರ್‌ ಜಿ ಕರ್‌ ಆಸ್ಪತ್ರೆಯಲ್ಲಿ ವೈದ್ಯೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಆಕೆಯ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲ್ಕತ್ತದ ತಾಲಾ ಪೊಲೀಸ್‌ ಠಾಣೆತಲ್ಲಿ ಕೆಲವು ದಾಖಲೆಗಳನ್ನು ʼತಿದ್ದಲಾಗಿದೆʼ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸುಳ್ಳು ದಾಖಲೆಗಳನ್ನು ʼಸೃಷ್ಟಿ ಮಾಡಲಾಗಿದೆʼ ಎಂದು ಸಿಬಿಐ ತನ್ನ ವರದಿಯಲ್ಲಿ ಆರೋಪಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ, ತಾಲಾ ಠಾಣೆಯ ಸಿಸಿ ಟಿವಿ ಕ್ಯಾಮೆರಾದ ದೃಶ್ಯಗಳನ್ನು ಜಪ್ತಿ ಮಾಡಿ, ಕೊಲ್ಕತ್ತದಲ್ಲಿರುವ ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ.

ತಾಲಾ ಠಾಣೆಯ ಅಧಿಕಾರಿ ಅಭಿಜಿತ್‌ ಮಂಡಲ್‌ ಮತ್ತು ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ತಿದ್ದಲಾದ ಹಾಗೂ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದ ಬಗ್ಗೆ ಕೆಲವು ಹೊಸ / ಹೆಚ್ಚುವರಿ ಸಂಗತಿಗಳು ವಿಚಾರಣೆಯ ಸಂದರ್ಭದಲ್ಲಿ ಬಯಲಾಗಿದೆ ಎಂದು ಸಿಬಿಐ ಮಾಹಿತಿ ನೀಡಿದೆ.

ಪೊಲೀಸ್‌ ಅಧಿಕಾರಿ ಮಂಡಲ್‌ ಹಾಗೂ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅವರಿಬ್ಬರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದ ಮುಂದೆ ಹಾಜಪಡಿಸಿದರು. ಈರ್ವರನ್ನೂ ಸೆ.೩೦ರ ತನಕ ನ್ಯಾಯಾಂಗ ಬಂಧನಕ್ಕೆ ಕೋರ್ಟ್‌  ಒಪ್ಪಿಸಿ ಆದೇಶಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!