Saturday, October 12, 2024

ಪೌರ ಕಾರ್ಮಿಕರನ್ನು ಅಗೌರವದಿಂದ ಕಾಣುವುದು ಶಿಕ್ಷಾರ್ಹ ಅಪರಾಧ !

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿಯ ಹೆಸರಿನಲ್ಲಿ ನಿಂದಿಸುವುದು ಕಾನೂನು ರೀತಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಭಾರತದ ಸಂವಿಧಾನದ 17ನೇ ವಿಧಿಯು ʼಅಸ್ಪೃಶ್ಯತೆʼ ಯನ್ನು ನಿಷೇಧಿಸಿದೆ ಮತ್ತು ಯಾವುದೇ ರೂಪದಲ್ಲಿ ಅದರ ಆಚರಣೆಯು ಅಪರಾಧವಾಗಿದೆ. ನೈರ್ಮಲ್ಯ / ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ಕೇವಲ ನೈತಿಕ ಬಾಧ್ಯತೆಯಾಗಿರದೆ ಸಮಾಜದ ಅಗತ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಅವರು ನಿರ್ವಹಿಸುವ ಉದ್ಯೋಗಕ್ಕಿಂತ ವೈಯಕ್ತಿಕ ಘನತೆ ಮತ್ತು ಗೌರವಕ್ಕೆ ಅರ್ಹರಾಗಿರುತ್ತಾರೆ. ನೈರ್ಮಲ್ಯ ಕಾರ್ಮಿಕರ / ಪೌರಕಾರ್ಮಿಕರ ವಿರುದ್ಧ ತಾರತಮ್ಯವು ಮೂಲಭೂತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ.

ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಎಲ್ಲಾ ನಿವಾಸಿಗಳು ಮತ್ತು ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ, ತಾವು ವಾಸಿಸುವ ಸ್ಥಳವನ್ನು / ಪರಿಸರವನ್ನು ದಿನನಿತ್ಯ ಸ್ವಚ್ಛಗೊಳಿಸುವ ಮೂಲಕ ಪೌರಕಾರ್ಮಿಕರು ತಮ್ಮ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಬಹು ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಪೌರಕಾರ್ಮಿಕರನ್ನು ಗೌರವದಿಂದ ಮತ್ತು ಘನತೆಯಿಂದ ನಡೆಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪೌರಕಾರ್ಮಿಕರನ್ನು ಅವರ ವೃತ್ತಿಯನ್ನು ಗೌರವಿಸಿ, ಅವರು ಸಮಾಜದಲ್ಲಿ ಘನತೆಯಿಂದ ಬದುಕಲು ಸಹಕರಿಸಲು, ಪೌರಕಾರ್ಮಿಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!