spot_img
Wednesday, January 22, 2025
spot_img

ಕುಂದಾಪುರ : ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

ಜನಪ್ರತಿನಿಧಿ (ಕುಂದಾಪುರ) : ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ (ಸೆ. 26, ಗುರುವಾರ) ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಯುತ್ತಿದ್ದು, ಕುಂದಾಪುರ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘವು ಕುಂದಾಪುರ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.

ʼಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದು, ಆಧುನಿಕ ತಂತ್ರಾಂಶಕ್ಕೆ ಸಂಬಂಧಿಸಿದಂತೆ ಅವಶ್ಯ ಸೌಲಭ್ಯವನ್ನು ಕಲ್ಪಿಸುವವರೆಗೆ ಸೆ. 22ರಿಂದ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್‌ಹುಕುಂ, ಹಕ್ಕುಪತ್ರ, ನಮೂನೆ 1–5 ವೆಬ್ ಅಪ್ಲಿಕೇಷನ್ ಮತ್ತು ಪೌತಿ ಆಂದೋಲನ ಆ್ಯಪ್ ತಂತ್ರಾಂಶಗಳ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ.

ಮಾತ್ರವಲ್ಲದೇ, ಗ್ರಾಮ ಆಡಳಿತಾಧಿಕಾರಿಗಳ ಸಂಘ ಪದೋನ್ನತಿ, ವರ್ಗಾವಣೆ, ನೌಕರರ ಅಮಾನತ್ತು ಸೇರಿ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಅವುಗಳಿಗೆ ಸರ್ಕಾರ ಸ್ಪಂದಿಸದೇ ಇರುವ ಕಾರಣ ಎಲ್ಲಾ ಬಗೆಯ ಮೊಬೈಲ್ ಆ್ಯಪ್ ಹಾಗೂ ನೆಟ್ ಅಪ್ಲಿಕೇಶನ್ ಸ್ಥಗಿತಗೊಳಿಸಿ ರಾಜ್ಯವ್ಯಾಪಿ ಮುಷ್ಕರ ಕೈಗೊಂಡಿದೆ.

ಕುಂದಾಪುರ ತಾಲೂಕು ಘಟಕದಿಂದ ಮುಷ್ಕರ ನಡೆಯುತ್ತಿದ್ದು, ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಶಿವರಾಯ ಎಸ್‌,  ಉಪಾಧ್ಯಕ್ಷ ಆನಂದ್ ಕುಮಾರ್, ಪ್ರಧಾನ ಕಾರ್ಯದರ್ಶಿ ವಿಗ್ನೇಶ್ ಉಪಾಧ್ಯ, ಖಜಾಂಚಿ ಸೋಮಪ್ಪ, ರಾಜ್ಯ ಪರಿಷತ್ ಸದ್ಯಸ್ಯ ಆನಂದ್ ಮುಕ್ಕಣ್ಣನವರ, ಮಹಿಳಾ ಕಾರ್ಯದರ್ಶಿ ಹೇಮಾ ಸೇರಿ  ಸಂಘದ ಸರ್ವ ಪದಾಧಿಕಾರಿಗಳು ಮತ್ತು ಸದ್ಯಸರು ಮುಷ್ಕರದಲ್ಲಿ ಭಾಗಿಯಾಗಿದ್ದರು.

ಬೇಡಿಕೆಗೆ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ : ಕುಂದಾಪುರ ತಾಲೂಕು ಘಟಕ
ಯೋಜನೆಗಳನ್ನು ಆರ್ಹ ವ್ಯಕ್ತಿಗಳ ಮನೆಬಾಗಿಲಿಗೆ ತಲುಪಿಸುವ ಕಾರ್ಯವನ್ನು ಗ್ರಾಮ ಆಡಳಿತಾಧಿಕಾರಿಗಳ ಮೂಲಕ ಸರ್ಕಾರ ಮಾಡುತ್ತಿದೆ, 2 ವರ್ಷದಿಂದ ರಜೆ ಇಲ್ಲದೇ ರಜಾ ದಿನಗಳಲ್ಲೂ ಗ್ರಾಮ ಆಡಳಿತಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾಕಷ್ಟು ವರ್ಷದಿಂದ ಗ್ರಾಮ ಆಡಳಿತಾಧಿಕಾರಿಗಳು ಬೇಡಿಕೆಗಳನ್ನು ಈಡೇರಿಸುವಂತೆ ಮನವಿಗಳು ಸರ್ಕಾರಕ್ಕೆ ಸಲ್ಲಿಸಲಾಗಿಎಯಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಶಿವರಾಯ ಎಸ್‌,  ಉಪಾಧ್ಯಕ್ಷ ಆನಂದ್ ಕುಮಾರ್, ರಾಜ್ಯ ಪರಿಷತ್ ಸದ್ಯಸ್ಯ ಆನಂದ್ ಮುಕ್ಕಣ್ಣನವರ ವಿಷಾದ ವ್ಯಕ್ತಪಡಿಸಿದರು.

ರಾಜ್ಯ ಸಂಘದ ನಿರ್ದೇಶನದಂತೆ ಸೆ.26, 27ರಂದು ಪ್ರತಿ ತಾಲೂಕು ಕಚೇರಿ ಆವರಣದಲ್ಲಿ, ಸೆ.28 ಮತ್ತು 29 ಜಿಲ್ಲಾಧಿಕಾರಿ ಕಚೇರಿ ಬಳಿ, ನಂತರ ಸೆ.30ರಿಂದ ರಾಜ್ಯಾದ್ಯಂತ ಮುಷ್ಕರ ನಡೆಸುವುದಕ್ಕೆ ರಾಜ್ಯ ಸಂಘದಿಂದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಸರಕಾರಿ ಕಂದಾಯ ನೌಕರರ ಸಂಘದ ಅಧ್ಯಕ್ಷ ರಾಘವೇಂದ್ರ ಬಾಹ್ಯ ಬೆಂಬಲ ನೀಡಿರುವುದಾಗಿಯೂ ತಿಳಿಸಿದರು.

ಗ್ರಾಮ ಆಡಳಿತಾಧಿಕಾರಿಗಳ ಪ್ರಮುಖ ಬೇಡಿಕೆಗಳು:

  • 17ಕ್ಕೂ ಹೆಚ್ಚು ಮೊಬೈಲ್ ಆ್ಯಪ್, ವೈಬ್ ಅಪ್ಲಿಕೇಷನ್ ಸೇರಿ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ನಿವಾರಣೆ
  • ಮೊಬೈಲ್‌, ಲ್ಯಾಪ್‌ಟ್ಯಾಪ್, ಇಂಟರ್‌ನೆಟ್, ಸ್ಕ್ಯಾನ‌ರ್ ವ್ಯವಸ್ಥೆ.
  • ನೌಕರರಿಗೆ ಉತ್ತಮ ಗುಣಮಟ್ಟದ ಟೇಬಲ್ ಖುರ್ಚಿ ವಿತರಣೆ, ಮೊಬೈಲ್‌, ಬೀ‌ರ್, ಸಿಯುಜಿ ಸಿಮ್, ಪ್ರಿಂಟರ್ ಸೇರಿದಂತೆ ಮೂಲ ಸೌಲಭ್ಯಗಳನ್ನು ನೀಡಬೇಕು.
  • ನೌಕರರು ಪದೋನ್ನತಿಯಲ್ಲಿ ವಂಚಿತರಾಗಿದ್ದು, ವಿವಿಧ ಹುದ್ದೆಗೆ ಮೇಲ್ದರ್ಜೆಗೇರಿಸಿ ಪದೋತ್ಪತಿಗೊಳಿಸಬೇಕು.
  • ಅಂತರ್ ಜಿಲ್ಲಾ ಪತಿಪತ್ನಿ ವರ್ಗಾವಣೆ ಪ್ರಕರಣ, ಕಂದಾಯ ಇಲಾಖೆಯಲ್ಲಿ 3 ವರ್ಷ ಸೇವೆಯನ್ನು ಪರಿಗಣಿಸಿ ಅಂತ‌ರ್ ಜಿಲ್ಲಾ ವರ್ಗಾವಣೆ.
  • ಮೊಬೈಲ್ ತಂತ್ರಾಂಶಗಳ ವಿಚಾರವಾಗಿ ಆಗಿರುವ ಅಮಾನತ್ತು ರದ್ದು ಪಡಿಸಬೇಕು.
  • ಪ್ರಯಾಣ ಭತ್ಯೆಯನ್ನು 500ರೂ ರಿಂದ 3ಸಾವಿರ ರೂ ಹೆಚ್ಚಳ ಮಾಡಬೇಕು.
  • ಕೆಲಸ ಆರಂಭ ಮತ್ತು ಅಂತ್ಯ ಎಲ್ಲಾ ಬಗ್ಗೆ ವರ್ಚುವಲ್ ಸಭೆಯನ್ನು ನಿಷೇಧಿಸಬೇಕು.
  • ಆಪತ್ತಿನ ಭತ್ಯೆ (ರಿಸ್ಕ್‌ ಅಲೋಯನ್ಸ್‌)
  • ಮನೆ ಹಾನಿ ಪ್ರಕರಣಗಳ ಜವಾಬ್ದಾರಿಯಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈಬಿಡಬೇಕು.
  • ಅನ್ಯ ಇಲಾಖೆಯ ಕೆಲಸ ನಿರ್ವಹಿಸದಂರೆ ಸೂಕ್ತ ಆದೇಶ ನೀಡುವ ಬಗ್ಗೆ.
  • ಗ್ರಾಮ ಸಹಾಯಕರಿಗೆ ಸೇವಾಭದ್ರೆತೆಯನ್ನು ಒದಗಿಸುವ ಬಗ್ಗೆ ಮತ್ತು ಇತ್ಯಾದಿ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!