Saturday, October 12, 2024

ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘ: ನಡೂರು ಗ್ರಾಮ: ಶತಸಾರ್ಥಕ್ಯ ಕಾರ್ಯಕ್ರಮ

ಮಂದಾರ್ತಿ : ಮಂದಾರ್ತಿ ಸೇವಾ ಸಹಕಾರಿ ಸಂಘದ ಶತಮಾನೋತ್ಸವದ ಶತ ಸಾರ್ಥಕ್ಯದ ಅಂಗವಾಗಿ ನಡೂರು ಗ್ರಾಮದ ಸದಸ್ಯರ ಸಮಾವೇಶವು ನಡೂರು ಶ್ರೀವಾಣಿ ಪ್ರೌಢಶಾಲೆಯ ಶಿವಶಂಕರ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು.

ಸಂಘದ ಅಧ್ಯಕ್ಷರಾದ ಎಚ್.ಗಂಗಾಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸಮಾವೇಶವನ್ನು ಉದ್ಘಾಟಿಸಿದರು. ಉದ್ಯಮಿ ಮಹೇಶ ಉಡುಪ ಮಂದಾರ್ತಿ, ಟೀಚರ್‍ಸ್ ಕೋ-ಆಪರೇಟಿವ್ ಸೊಸೈಟಿ ಮಾಜಿ ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ಕಾಡೂರು ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷರಾದ ಕೆ.ಶಂಭು ಶಂಕರ ರಾವ್, ನಿರ್ದೇಶಕರಾದ ಶೇಡಿಕೊಡ್ಲು ವಿಠಲ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಗುರುಪ್ರಸಾದ್, ಸಂತೋಷ್ ಶೆಟ್ಟಿ, ಬಸವ ಮರಾಠಿ, ಪ್ರವೀಣ್ ಕುಮಾರ್ ಶೆಟ್ಟಿ, ಬೇಬಿ ಪೂಜಾರಿ, ಪ್ರೇಮ, ರಾಧಾ, ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ಶೆಟ್ಟಿ, ರಾಜಾರಾಮ ಶೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ೧೨ ಮಂದಿಯನ್ನು ಗೌರವಿಸಲಾಯಿತು. ಶೇಡಿಕೊಡ್ಲು ವಿಠಲ ಶೆಟ್ಟಿ ಸ್ವಾಗತಿಸಿ, ಎ.ಕೆ ಶೆಟ್ಟಿ ನಡೂರು ಕಾರ್ಯಕ್ರಮ ನಿರ್ವಹಿಸಿದರು. ರಾಮಕೃಷ್ಣ ಶೆಟ್ಟಿ ವಂದಿಸಿದರು,

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!