spot_img
Monday, June 23, 2025
spot_img

ರೆಡ್ ಕ್ರಾಸ್ ಸಂಸ್ಥೆ, ಉಡುಪಿ : ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗೆ ಅರ್ಜಿ ಆಹ್ವಾನ

ಜನಪ್ರತಿನಿಧಿ (ಉಡುಪಿ) : ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲೆ ಇವರು ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

18 ರಿಂದ 30 ವರ್ಷದವರೆಗಿನ ವಯೋಮಿತಿಯ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀಣ ಮತ್ತು ಅನುತ್ತೀರ್ಣರಾದವರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಮೇಲ್ಪಟ್ಟ ವಿದ್ಯಾರ್ಹತೆ ಇದ್ದವರೂ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತ ಸರಕಾರದ ಕೌಶಲ್ಯಾಭಿವೃದ್ಧಿ ಮಂತ್ರಾಲಯದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯತೆ ಪಡೆದ ಪಠ್ಯ ಕ್ರಮದಲ್ಲಿ ತರಬೇತಿ ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ಊಟೋಪಚಾರ ಮತ್ತು ಅಗತ್ಯವಿರುವವರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು ಎಂದೂ ತಿಳಿಸಿದೆ.

ತರಬೇತಿಯನ್ನು ಪೂರೈಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸಲಾಗುವುದು. ದಿನಾಂಕ 10. 10.2024 ರೊಳಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಜಿಲ್ಲಾ ರೆಡ್ ಕ್ರಾಸ್ ಕಛೇರಿ ಅಜ್ಜರಕಾಡು ಉಡುಪಿ 576101 ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ. 8310311448 ಅಥವಾ 9741762007 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!