Saturday, October 12, 2024

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ ವಿಧಿವಶ

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ (85ವ) ವಯೋಸಹಜ ಕಾರಣದಿಂದ ಸೆ.27ರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.

ಮೃತರು ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಮೃತರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಅವರ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆಡೆಯಲಿದೆ.

ಸತತ ಸ್ಪರ್ಧೆ ಬಳಿಕ ಗೆಲುವು ಪಡೆದವರು:

ಸತತ ಮೂರು ಬಾರಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧೆ ಮಾಡಿದ್ದ ಲಕ್ಷ್ಮೀನಾರಾಯಣ ಅವರು ಮೂರನೇ ಬಾರಿಗೆ ಗೆಲುವು ಸಾಧಿಸಿ ಶಾಸಕರಾಗಿದ್ದರು. 1999ರಲ್ಲಿ ಪ್ರಥಮ ಬಾರಿಗೆ ಸ್ಪರ್ಧೆ ಮಾಡಿದ್ದ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆ.ಗೋಪಾಲ ಪೂಜಾರಿ ಅವರಿಂದ 5382 ಮತಗಳಿಂದ ಸೋಲು ಕಂಡಿದ್ದರು. ಅಲ್ಲಿಗೆ ಬಿಡದ ಅವರು 2004ರಲ್ಲಿ ಮತ್ತೆ ಸ್ಪರ್ಧೆ ಮಾಡಿ 3252 ಮತಗಳಿಂದ ಪರಾಭವಗೊಂಡಿದ್ದರು. 3ನೇ ಬಾರಿಗೆ ಛಲ ಬಿಡದೆ 2008ರಲ್ಲಿ ಸ್ಪರ್ಧೆ ಮಾಡಿದ ಇವರು 7970 ಮತಗಳಿಂದ ಕೆ.ಗೋಪಾಲ ಪೂಜಾರಿ ಅವರನ್ನು ಸೋಲಿಸಿ ಕಾಂಗ್ರೆಸ್ ಭದ್ರ ಕೋಟೆಯನ್ನು ಛಿದ್ರಗೊಳಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!