Saturday, October 12, 2024

ಕೆಪಿಎಸ್‌ಸಿ : ಡಿ. 29ಕ್ಕೆ ಮರು ಪರೀಕ್ಷೆ ನಿಗದಿ !?

ಜನಪ್ರತಿನಿಧಿ (ಬೆಂಗಳೂರು) : ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಡಿ. 29ರಂದು ಪೂರ್ವಭಾವಿ ಮರುಪರೀಕ್ಷೆಯನ್ನು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಮರು ಪರೀಕ್ಷೆಯ ದಿನಾಂಕ ನಿಗದಿಪಡಿಸುವ ಬಗ್ಗೆ ನಿನ್ನೆ (ಗುರುವಾರ) ಆಯೋಗದ ಸಭೆ ನಡೆಯಿತು.

ಇತ್ತೀಚೆಗೆ (ಆಗಸ್ಟ್ 27ರಂದು) ಈ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ನಡೆದಿತ್ತು. ಆದರೆ, ಪ್ರಶ್ನೆಪತ್ರಿಕೆ 1 ಮತ್ತು 2ರಲ್ಲಿನ ಪ್ರಶ್ನೆಗಳನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ಡಿದ ಭಾಷಾಂತರದಲ್ಲಿ ಹಲವು ತಪ್ಪುಗಳು ಕಾಣಿಸಿದ್ದವು. ಪ್ರಶ್ನೆ ಪತ್ರಿಕೆಗಳು ಕೆಲವು ತಿಂಗಳುಗಳ ಮುಂಚೆಯೇ ತಯಾರಿ ಆಗಿತ್ತು ಎಂದು ಸ್ವತಃ ಆಯೋಗವೇ ಹೇಳಿತ್ತು, ಈ ಹಿನ್ನೆಲೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಆಗ್ರಹಿಸಿದ್ದರು. ಈ ಬೇಡಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡಪರ ಸಂಘಟನೆಗಳೂ ದನಿಗೂಡಿಸಿದ್ದವು.

ಹೀಗಾಗಿ, ಎರಡು ತಿಂಗಳ ಒಳಗೆ ಮರು ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಎಸ್‌ಸಿಗೆ ಸೂಚನೆ ನೀಡಿದ್ದರು. ಮುಖ್ಯಮಂತ್ರಿ ಸೂಚನೆ ನೀಡಿದ ನಂತರ ಆಯೋಗದ ಮೂರು ಸಭೆಗಳು ನಡೆದರೂ ಮರು ಪರೀಕ್ಷೆ ದಿನಾಂಕ ನಿಗದಿ ಆಗಿರಲಿಲ್ಲ. ಮರು ಪರೀಕ್ಷೆಯ ದಿನಾಂಕ ನಿಗದಿಪಡಿಸುವಂತೆ ಕೆಲವು ಸದಸ್ಯರು ಪಟ್ಟು ಹಿಡಿದಿದ್ದರು ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!