Sunday, October 13, 2024

ಕಸ್ತೂರಿ ರಂಗನ್‌ ವರದಿ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟ ನಿರ್ಧಾರ !

ಜನಪ್ರತಿನಿಧಿ (ಬೆಂಗಳೂರು) : ಪಶ್ಚಿಮಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ.ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರಕ್ಕೆ ಬಂದಿದೆ.

ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನೇ ಮುಂದುವರಿಸಲು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಪಶ್ಚಿಮಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು 2024ರ ಜುಲೈ 31ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿತ್ತು. ಈ ಸಂಬಂಧಿಸಿದಂತೆ 60 ದಿನಗಳಲ್ಲಿ ಆಕ್ಷೇಪಣೆಗಳು ಮತ್ತುಹಾಗೂ ಸಲಹೆಗಳನ್ನು ಸಲ್ಲಿಸುವಂತೆ ರಾಜ್ಯಗಳಿಗೆ ಸೂಚಿಸಿತ್ತು.

20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕಸ್ತೂರಿರಂಗನ್ ವರದಿ ಗುರುತಿಸಿತ್ತು. ಇದರಲ್ಲಿ ಆಗಿದ್ದ ಕೆಲವು ಲೋಪಗಳನ್ನು ತಿದ್ದುಪಡಿ ಮಾಡಿದಾಗ, 19,252.70 ಚ.ಕಿ.ಮೀ ಪರಿಸರ ಸೂಕ್ಷ್ಮ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ರಾಜ್ಯದ ವಿವಿಧ ಅರಣ್ಯ ಕಾನೂನುಗಳ ಅಡಿಯಲ್ಲಿ ಈಗಾಗಲೇ 16,164 ಚದರ ಕಿ.ಮೀ ಅರಣ್ಯ ಪ್ರದೇಶವನ್ನು ಸಂರಕ್ಷಿಸಲಾಗುತ್ತಿದೆ. ಹಾಗಾಗಿ ಕಸ್ತೂರಿರಂಗನ್ ವರದಿ ತಿರಸ್ಕರಿಸುವ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!