Saturday, October 12, 2024

ಆನಂದ ಸಿ. ಕುಂದರ್ ಅವರಿಗೆ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿ

ಕುಂದಾಪುರ: ಸರಕಾರಿ ಶಾಲಾ ಎಸ್‌ಡಿ‌ಎಂಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲೆ ಇವರ ಕೊಡ ಮಾಡುವ 2024-25ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಆವರನ್ನು ಆಯ್ಕೆ ಮಾಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಆನಂದ್ ಕುಂದರ್ ಆವರು ಬಹುತೇಕ ಸರಕಾರಿ ಶಾಲೆಗಳಲ್ಲಿನ ಬೇಡಿಕೆಗಳನ್ನು ದೊಡ್ಡ ಮಟ್ಟದಲ್ಲಿ ಸಹಾಯ ಸಹಕಾರ ನೀಡುವುದರ ಜೊತೆಗೆ ಪ್ರತಿ ವರ್ಷ ಗೀತಾನಂದ ಫೌಂಡೇಶನ್ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ನೋಟ್ ಪುಸ್ತಕ ವಿತರಣೆ ಮಾಡುತ್ತಿದ್ದಾರೆ. ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಆಸಕ್ತಿ ಮೂಡಿಸುತ್ತಿದ್ದಾರೆ. ಗೀತಾನಂದ ಪೌಂಡೇಶನ್ ಮೂಲಕ ಪ್ರತೀ ವರ್ಷ ಸರಕಾರಿ ಶಾಲೆಗಳಲ್ಲಿ ಬೆಲೆ ಬಾಳುವ ಗಿಡಗಳನ್ನು ನೆಟ್ಟು ಪರಿಸರ ಪ್ರೀತಿಯನ್ನು ಬೆಳೆಸುವ ಬಹುದೊಡ್ಡ ಕೆಲಸ ಮಾಡುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೆ.29ರಂದು ಬೆಳಗ್ಗೆ 10ಕ್ಕೆ ಆನೆಗುಡ್ಡೆ ಶ್ರೀ ವಿನಾಯಕ ಸಭಾಭವನ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!