Tuesday, October 22, 2024

ಉತ್ತಮ ಆಹಾರ ಪದ್ಧತಿಯಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯ-ಡಾ. ಪರೀಕ್ಷಿತ ನಾವುಡ ಕೆ. ಎಸ್.

ಕೋಟೇಶ್ವರ: ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯವಂತ ಜೀವನಕ್ಕೆ ಅವನು ತೆಗೆದುಕೊಳ್ಳುವ ಆಹಾರ ಪದ್ದತಿಯನ್ನು ಅವಲಂಬಿಸಿದೆ, ನಮ್ಮ ಹಿಂದಿನ ತಲೆಮಾರು ತಾಯಂದಿರು ಸಿದ್ಧಪಡಿಸುತ್ತಿದ್ದ ಆಹಾರ ಪ್ರಪಂಚದ ಅತ್ಯಂತ ಆರೋಗ್ಯಪೂರ್ಣ ಆಹಾರವಾಗಿದ್ದು, ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಪೂರಕವಾಗಿತ್ತು. ಆದರೆ ಇಂದು ಮನುಷ್ಯನ ದಾವಂತದ ಬದುಕಿನಿಂದಾಗಿ ಭಾರತೀಯ ಸಾಂಪ್ರದಾಯಿಕ ಆಹಾರ ಪದ್ದತಿಯು ನಿಧಾನವಾಗಿ ಕಣ್ಮರೆಯಾಗುತ್ತಿದೆ. ಯುವ ಜನತೆ ಪಾಶ್ಚ್ಯಾತ್ಯ ಆಹಾರ ಪದ್ದತಿಗಳಿಗೆ ಒಗ್ಗಿಕೊಳ್ಳುತ್ತಿರುವುದು ಅತ್ಯಂತ ವಿಷಾದನೀಯ. ಆದುದರಿಂದ ಯುವಜನತೆಗಳಾದ ನೀವು ನಮ್ಮ ಆಹಾರ ಪದ್ಧತಿಯನ್ನು ಅನುಸರಿಸುವ ಮೂಲಕ ಮುಂದಿನ ತಲೆಮಾರಿನವರಿಗೂ ತಲುಪಿಸುವ ಕಾರ್ಯವನ್ನು ಮಾಡಬೇಕು.” ಎಂದು ಕುಂದಾಪುರ ಗ್ರಾಮೀಣ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕೋಟೇಶ್ವರ ಇಲ್ಲಿನ ಸಹಾಯಕ ಪ್ರಾಧ್ಯಾಪಕ ಡಾ. ಪರೀಕ್ಷಿತ ನಾವುಡ ಹೇಳಿದರು.

ಅವರು, ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ವತಿಯಿಂದ ಸಂಘಟಿಸಲಾದ ಪೋಷಣ್ ಮಾಸದ ಸಂಬಂಧ ಹಮ್ಮಿಕೊಳ್ಳಲಾದ ಆಹಾರ ಮತ್ತು ಆರೋಗ್ಯ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ ವಹಿಸಿ ವಿದ್ಯಾರ್ಥಿಗಳು ಇಂದು ಮಾರುಕಟ್ಟೆಯಲ್ಲಿ ಸಿಗುವ ಪಾಸ್ಟ್ ಫುಡ್‍ಗಳಿಗೆ ಮಾರು ಹೋಗದೆ ಆರೋಗ್ಯವಂತ ಮನಸ್ಸು ಮತ್ತು ದೇಹಕ್ಕೆ ಅಗತ್ಯವಿರುವ ಆಹಾರವನ್ನು ತೆಗೆದುಕೊಂಡಾಗ ಅನಗತ್ಯ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗದೇ ಜೀವನವನ್ನು ನಡೆಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ರಾಮರಾಯ ಆಚಾರ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದ್ವಿತೀಯ ಬಿ. ಎ. ರಕ್ಷಿತಾ ಮತ್ತು ತಂಡದವರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು.

ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ರ ಕಾರ್ಯಕ್ರಮಾಧಿಕಾರಿ ಸಂತೋಷ ನಾಯ್ಕ ಹೆಚ್. ಕಾರ್ಯಕ್ರಮವನ್ನು ಸಂಘಟಿಸಿ ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾ ದ್ವಿತೀಯ ಬಿ ಸಿ ಎ ವಂದಿಸಿದರು. ವೈಷ್ಣವಿ ದ್ವಿತೀಯ ಬಿ ಸಿ ಎ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!