Saturday, October 12, 2024

ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನಕ್ಕೆ ಶಾಸಕ ಗಂಟಿಹೊಳೆ ಸಂತಾಪ

ಬೈಂದೂರು: ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ  ಅವರ ನಿಧನಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸಂತಾಪ ಸೂಚಿಸಿದ್ದಾರೆ.
ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯಕರ್ತರನ್ನು ಸಂಘಟಿಸಿದ್ದ ಲಕ್ಷ್ಮೀನಾರಾಯಣರು ಅವರು ಶಾಸಕರಾಗಿದ್ದ ಅವಧಿಯಲ್ಲಿ ಅಭಿವೃದ್ಧಿಯ ಶಕೆಯನ್ನು ಆರಂಭಿಸಿದವರು. ನಾವೆಲ್ಲ ಸಣ್ಣವರಿದ್ದಾಗಲೇ ನಮ್ಮನ್ನು ಸದೃಢ ಕಾರ್ಯಕರ್ತರನ್ನಾಗಿ ಬೆಳೆಸಿದ ಅವರು, ಬೈಂದೂರನ್ನು ಬಹಳವಾಗಿ ಪ್ರೀತಿಸುತ್ತಾ ಕ್ಷೇತ್ರದ ಕಾರ್ಯಕರ್ತರ ಹಾಗೂ ಜನರ ಪ್ರೀತಿಗೆ ಪಾತ್ರರಾಗಿದ್ದವರು. ಜೀವನದುದ್ದಕ್ಕೂ ಭ್ರಷ್ಟಾಚಾರವನ್ನು ವಿರೋಧಿಸುತ್ತಲೇ ಬದುಕಿದ್ದ ಅವರು, ಅನಾರೋಗ್ಯದ ಸಂದರ್ಭದಲ್ಲಿಯೂ ಕ್ಷೇತ್ರದ ಜನರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದವರು. ಅವರ ನಿಧನ ಬೈಂದೂರು ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!