Saturday, October 12, 2024

ಕೇರಳದಲ್ಲಿ ಮತ್ತೊಂದು ಎಂಪಾಕ್ಸ್‌ ಪ್ರಕರಣ ಪತ್ತೆ ! ಮುಂಜಾಗ್ರತೆಗೆ ಸೂಚನೆ

ಜನಪ್ರತಿನಿಧಿ(ಕೇರಳ): ರಾಜ್ಯದಲ್ಲಿ ಮತ್ತೊಂದು ಎಂಪಾಕ್ಸ್ ಪ್ರಕರಣ ವರದಿಯಾಗಿದೆ ಎಂದು ಕೇರಳ ಆರೋಗ್ಯ ಇಲಾಖೆ ಇಂದು(ಶುಕ್ರವಾರ) ಮಾಹಿತಿ ನೀಡಿದೆ. ರೋಗಲಕ್ಷಣಗಳನ್ನು ಹೊಂದಿರುವವರು ಚಿಕಿತ್ಸೆಗೊಳಗಾಗುವಂತೆ ಇಲಾಖೆ ಮನವಿ ಮಾಡಿಕೊಂಡಿದೆ.

ಸೆ.18ರಂದು ಕೇರಳದ ವ್ಯಕ್ತಿಯೊಬ್ಬರಿಗೆ ಎಂಪಾಕ್ಸ್ ದೃಢಪಟ್ಟಿತ್ತು. ಪರಿಸ್ಥಿತಿಯನ್ನು ಅವಲೋಕಿಸಲು ಇಂದು ಉನ್ನತ ಮಟ್ಟದ ಸಭೆ ನಡೆಸಲಾಗಿತ್ತೆಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳ ಸರ್ಕಾರದ ಆರೋಗ್ಯ ಸಚಿವೆ ವೀಣಾ ಜಾರ್ಜ್ ರೋಗಿಯ ಸಂಪರ್ಕ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ವಿದೇಶದಿಂದ ರಾಜ್ಯಕ್ಕೆ ಬಂದ ಪ್ರತಿಯೊಬ್ಬರು ಯಾವುದೇ ರೋಗಲಕ್ಷಣಗಳು ಕಂಡುಬಂದಲ್ಲಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವಂತೆ ಅವರು ಮನವಿ ಮಾಡಿದ್ದಾರೆ.

ಕೊಲ್ಲಿ ರಾಷ್ಟ್ರದಿಂದ ಹಿಂತಿರುಗಿದ ಮಲಪ್ಪುರ ಜಿಲ್ಲೆಯ 38 ವರ್ಷದ ವ್ಯಕ್ತಿಯೊಬ್ಬರಿಗೆ ಎಂಪಾಕ್ಸ್ ಇರುವುದು ಸೆ.18ರಂದು ದೃಢಪಟ್ಟಿತ್ತು. ಅವರಲ್ಲಿ ಸೋಂಕಿಗೆ ಕಾರಣವಾಗಿರುವುದು ಎಂಪಾಕ್ಸ್ ಕ್ಲಾಡ್1 ತಳಿ ಎಂಬುದು ಪರೀಕ್ಷೆಯಲ್ಲಿ ಖಚಿತವಾಗಿದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿದ್ದವು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!