spot_img
Wednesday, April 1, 2026
spot_img

ಬಿ. ಬಿ. ಹೆಗ್ಡೆ ಕಾಲೇಜು : ‘ಡೆಂಗ್ಯೂ ಅರಿವು’ ಕಾರ್ಯಕ್ರಮ

ಕುಂದಾಪುರ : ಇಲ್ಲಿನ ಡಾ| ಬಿ ಬಿ ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್ ಹಾಗೂ ರೋಟರಿ ಕ್ಲಬ್ ಕುಂದಾಪುರದ ಜಂಟಿ ಆಶ್ರಯದಲ್ಲಿ ‘ಡೆಂಗ್ಯೂ ಅರಿವು’ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ ಅವರು ಮಾತನಾಡಿ, ಡೆಂಗ್ಯೂ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ ವಹಿಸಿದ್ದರು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ರೊ. ಲಿಯಾಕತ್, ಕಾರ್ಯದರ್ಶಿ ರೊ. ಸಚ್ಚಿದಾನಂದ, ರೋಟರಾಕ್ಟ್ ಕ್ಲಬ್ ಕುಂದಾಪುರದ ಸಭಾಪತಿ ಶ್ರೀ ವೆಂಕಟೇಶ್ ಪ್ರಭು, ಕಾರ್ಯಕ್ರಮದ ಸಂಯೋಜಕಿ ಶ್ರೀಮತಿ ಅವಿತಾ ಕೊರೆಯಾ, ಕಾಲೇಜಿನ ರೋಟರಾಕ್ಟ್ ಕ್ಲಬ್ನ ಅಧ್ಯಕ್ಷ ದ್ವಿತೀಯ ಬಿಸಿ‌ಎ ಆದಿತ್ಯ ಹಾಗೂ ಕಾರ್ಯದರ್ಶಿ ದ್ವಿತೀಯ ಬಿಸಿ‌ಎ ಮಾನ್ಯ ಉಪಸ್ಥಿತರಿದ್ದರು.

ಕಾಲೇಜಿನ ರೋಟರಾಕ್ಟ್ ಕ್ಲಬ್ನ ಸಂಯೋಜಕ  ಸತೀಶ್ ಶೆಟ್ಟಿ ಹೆಸ್ಕೂತ್ತೂರು ಸ್ವಾಗತಿಸಿ, ವಿದ್ಯಾರ್ಥಿನಿ ಸ್ನೇಹಾ ಪ್ರಾರ್ಥಿಸಿ, ಪ್ರಥಮ್ ಭಂಡಾರಿ ದ್ವಿತೀಯ ಬಿಬಿ‌ಎ ವಂದಿಸಿ, ಶ್ರದ್ಧಾ ತೃತೀಯ ಬಿಬಿ‌ಎ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!