Saturday, October 12, 2024

ನಾಗಮಂಗಲ ಗಲಭೆ : 55 ಆರೋಪಿಗಳಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ಮಂಜೂರು !

ಜನಪ್ರತಿನಿಧಿ (ಮಂಡ್ಯ) : ನಾಗಮಂಗಲದ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 55 ಆರೋಪಿಗಳಿಗೆ ಮಂಡ್ಯ 1ನೇ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ನಾಳೆ, ನಾಡಿದ್ದು ರಜೆ ಇರುವ ಹಿನ್ನೆಲೆ ಸೋಮವಾರ ಬಿಡುಗಡೆ ಮಾಡಲಿದ್ದಾರೆ. ಸೆಪ್ಟೆಂಬರ್ 11ರಂದು ಆರೋಪಿಗಳನ್ನು ಬಂಧಿಸಲಾಗಿತ್ತು.

ಗಣೇಶನ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕೋಮುಗಲಭೆ ಆರಂಭಗೊಂಡು ಜಿಲ್ಲೆಯ ನಾಗಮಂಗಲ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಕಂಡಕಂಡಲ್ಲಿ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು. ಕಲ್ಲು ತೂರಾಟ ಮಾಡಿದ್ದರು. ಇಡೀ ಪ್ರಕರಣದ ಕೇಂದ್ರ ಬಿಂದು ಬದ್ರಿಕೊಪ್ಪಲು ಗ್ರಾಮ ಅಕ್ಷರಶಃ ಸ್ಮಶಾನ ಮೌನ ಆವರಿಸಿತ್ತು. ಬಂಧನ ಭೀತಿಯಲ್ಲಿ ಹಲವು ಯುವಕರು ಗ್ರಾಮವನ್ನ ತೊರೆದಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಹಿಂದೂ ಸಮುದಾಯದ 18 ಮತ್ತು ಮುಸ್ಲಿಂ ಸಮುದಾಯದ 37 ಆರೋಪಿಗಳಿಗೆ ಜಾಮೀನು ದೊರಕಿದೆ.

ಆರೋಪಿಗಳು ಇನ್ನೂ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದು, 1 ಲಕ್ಷ ರು. ಮೌಲ್ಯದ ಬಾಂಡ್ ಹಾಗೂ ‘ಡಬಲ್ ಶ್ಯೂರಿಟಿ’ ನೀಡಿದ ಬಳಿಕ ಕಾರಾಗೃಹದಿಂದ ಬಿಡುಗಡೆ ಆಗುತ್ತಾರೆ” ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಂಧನದ ಭೀತಿಯಲ್ಲಿದ್ದ ಕಿರಣ್ ಎಂಬಾತ ಬ್ರೈನ್ ಸ್ಟೋಕ್ ನಿಂದಾಗಿ ಇತ್ತೀಚೆಗೆ ಸಾವನ್ನಪ್ಪಿದ್ದ.

ಕಳೆದ ಸೆಪ್ಟೆಂಬರ್ 11ರಂದು ನಾಗಮಂಗಲ ಅಕ್ಷರಶಃ ಹೊತ್ತಿ ಉರಿದಿತ್ತು. ಈ ಗಲಭೆ ಪ್ರಕರಣದ ಕಾರ್ಯಾಚರಣೆಗೆ ಇಳಿದಿದ್ದ ಪೊಲೀಸರು 55 ಆರೋಪಿಗಳನ್ನು ಬಂಧಿಸಿದ್ದರು. ನಾಗಮಂಗಲವನ್ನು ಸಂಪೂರ್ಣ ನಿಯಂತ್ರಿಸಲು ಹರಸಾಹಸ ಪಟ್ಟಿದ್ದರು. ಆರೋಪಿಗಳನ್ನು ಬಂಧಿಸಿದ ಬಳಿಕ ನಾಗಮಂಗಲದ ಗಲಭೆ ರಾಜಕೀಯ ತಿರುವುಗಳನ್ನು ಪಡೆದುಕೊಂಡಿತ್ತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!