spot_img
Wednesday, April 1, 2026
spot_img

ಚುನಾವಣಾ ಬಾಂಡ್‌ : ತನಿಖೆಯಾದರೇ, ಮೋದಿಯವರೂ ರಾಜೀನಾಮೆ ನೀಡಬೇಕು : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು) : ಮುಡಾ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಸಿಎಂ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿಕೊಂಡಿರುವುದು ಹಾಗೂ ಜನಪ್ರತಿನಿಧಿ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಸೂಚಿಸಿದ ಬೆನ್ನಲ್ಲೆ ರಾಜ್ಯ ಬಿಜೆಪಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸುತ್ತಿದೆ ಈ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದಾರಾಮಯ್ಯ ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಮೇಲೆ ಎಫ್ ಐ ಆರ್ ದಾಖಲಿಸುವಂತೆ ಆದೇಶ ಹೊರಬಿದ್ದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ನಿರ್ಮಲಾ ಸೀತಾರಾಮನ್‌ ಅವರ ರಾಜೀನಾಮೆಗೆ ರಾಜ್ಯ ಬಿಜೆಪಿ ನಾಯಕರು ಯಾವಾಗ ಪ್ರತಿಭಟನೆ, ಪಾದಯಾತ್ರೆ ಮಾಡುತ್ತಾರೆ? ಎಂದು ಅವರು ಪ್ರಶ್ನಿಸಿದ್ದಲ್ಲದೇ, ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ಅವರೂ ರಾಜೀನಾಮೆ ನೀಡಬೇಕಾಗುತ್ತದೆ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜೀನಾಮೆ ನೀಡಲಿ. ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!