Sunday, October 13, 2024

ಸಾಹಿತಿ ಹಂಪನಾ ಅವರಿಂದ ದಸರಾ ಉತ್ಸವಕ್ಕೆ ಚಾಲನೆ | ಜನರ ಉತ್ಸವದಂತೆ ದಸರಾ ಉತ್ಸವ ಆಚರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಜನಪ್ರತಿನಿಧಿ (ಮೈಸೂರು) : ಸಾಹಿತಿ ಹಂ.ಪ. ನಾಗರಾಜಯ್ಯ ಅವರಿಂದ  ಈ ಬಾರಿಯ ದಸರಾ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಕ್ಟೋಬರ್, 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ. ನಾಗರಾಜಯ್ಯ ನವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ ಉದ್ಘಾಟನೆ, ವಸ್ತುಪ್ರದರ್ಶನ, ದಸರಾ ಕ್ರೀಡಾ ಉತ್ಸವ ಉದ್ಘಾಟನೆ, ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ದಸರಾ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ಧತೆಗಳನ್ನು ಮಾಡುತ್ತಿರುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ.

ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಸರಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಇತ್ತೀಚೆಗೆ ನಾಗಮಂಗಲದ ಘಟನೆ, ಪೊಲೀಸರ ಕರ್ತವ್ಯ ಲೋಪದಿಂದ ನಡೆದಿದ್ದು, ಎಚ್ಚರಿಕೆ ವಹಿಸಿದ್ದರೆ ಅನಾಹುತ ನಡೆಯುತ್ತಿರಲಿಲ್ಲ. ಆ ರೀತಿಯ ಲೋಪಗಳು ದಸರಾ ಸಂದರ್ಭದಲ್ಲಿ ನಡೆಯಬಾರದೆಂದು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!