spot_img
Wednesday, January 22, 2025
spot_img

ಕಾರ್ಮಿಕರ ನಿಧಿ ಬೇರೆಡೆ ಬಳಕೆ : ಇದು ದುರಂತದ ದೌರ್ಭಾಗ್ಯವಲ್ಲದೆ ಬೇರೇನೂ ಅಲ್ಲ : ಕಾಂಗ್ರೆಸ್‌ ವಿರುದ್ಧ ವಿಜಯೇಂದ್ರ ಆಕ್ರೋಶ

ಜನಪ್ರತಿನಿಧಿ (ಬೆಂಗಳೂರು) : ಗ್ಯಾರಂಟಿ ಯೋಜನೆಗಳ ಜಾತ್ರೆಯಲ್ಲಿ ಮುಳುಗಿ ಒಂದೇ ಒಂದು ಹೊಸ ಯೋಜನೆಗಳನ್ನು ಜಾರಿಗೊಳಿಸದೆ, ಯಾವೊಂದು ಹೊಸ ಕಾಮಕಾರಿಗಳಿಗೆ ಚಾಲನೆ ನೀಡದ ಆಡಳಿತ ಯಂತ್ರಕ್ಕೆ ತುಕ್ಕು ಹಿಡಿದಿರುವ ಈ ಸರ್ಕಾರದಲ್ಲಿ ಎಸ್.ಟಿ ನಿಗಮದ ಹಣ ಲೂಟಿಯಾಯಿತು. ಬೊಕ್ಕಸ ಬರಿದು ಮಾಡಿಕೊಂಡು ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಮೀಸಲಿದ್ದ ಹಣವನ್ನೆಲ್ಲಾ ಅನ್ಯ ಕಾರ್ಯಗಳಿಗೆ ಬಳಸಿಕೊಂಡರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.

ಕಟ್ಟಡ ಕಾರ್ಮಿಕರ ಬಡಮಕ್ಕಳ ಶಿಕ್ಷಣ ಹಾಗೂ ಇತರ ಅವಶ್ಯಕತೆಗಳಿಗೆಂದು ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯಲ್ಲಿ ಮೀಸಲಿಟ್ಟ ಹಣವನ್ನು ಇತರ ಉದ್ದೇಶಗಳಿಗೆ ಬಳಕೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಸರ್ಕಾರದ ವಿರುದ್ಧ ಹೈಕೋರ್ಟ್‌ ಆಕ್ರೋಶ ವ್ಯಕ್ತಪಡಿಸಿತ್ತು, ಈ ಸಂಬಂಧಿಸಿರುವ ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ವಿಜಯೇಂದ್ರ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಕಾಂಗ್ರೆಸ್‌ ಅನ್ನು ಟೀಕಿಸಿದ ಅವರು, ಇದೀಗ ಕಾರ್ಮಿಕರ ಸರದಿ ಎಂಬಂತೆ ಕಟ್ಟಡ ಕಾರ್ಮಿಕರ ಬಡ ಮಕ್ಕಳ ಶಿಕ್ಷಣ ಹಾಗೂ ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯಲ್ಲಿ ಮೀಸಲಿಟ್ಟ ಹಣವನ್ನು ಇತರ ಉದ್ದೇಶಗಳಿಗೆ ಬಳಸಿರುವುದು ದುರಂತದ ದೌರ್ಭಾಗ್ಯವಲ್ಲದೆ ಬೇರೇನೂ ಅಲ್ಲ ಎಂದಿದ್ದಾರೆ.

ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರ, ಅಧಿಕಾರದ ವ್ಯಾಮೋಹ, ಭಂಡತನಕ್ಕೆ ಜನರೇ ತಕ್ಕಪಾಠ ಕಲಿಸುವ ಕಾಲ ದೂರವಿಲ್ಲ ಎಂದೂ ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!