Saturday, October 12, 2024

ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಸೆ.30, ಅ,1ರಂದು ಗಿನ್ನಿಸ್ ವಿಶ್ವ ದಾಖಲೆಯ ಪ್ರಮಾಣ ಪತ್ರ ವಿತರಣೆ

ಕುಂದಾಪುರ: ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ರಜತ ಮಹೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಬೆಳವಣಿಗೆಗೆ ಅಭೂತಪೂರ್ವ ಅವಕಾಶಗಳನ್ನು ಸೃಷ್ಟಿಸುವ ನೆಲೆಯಲ್ಲಿ ರೂಬಿಕ್ಸ್ ಕ್ಯೂಬ್ ಮೂಲಕ ಎರಡು ಗಿನ್ನಿಸ್ ವಿಶ್ವ ದಾಖಲೆಗಳನ್ನು ಕಳೆದ ಶೈಕ್ಷಣಿಕ ವರ್ಷದಲ್ಲಿ ಮಾಡಿದ್ದು ಇದೀಗ ಗಿನ್ನಿಸ್ ವಲ್ರ್ಡ್ ರೆಕಾರ್ಡ್ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮವನ್ನು ಸೆ.30 ಮತ್ತು ಅ.1ರಂದು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಹೇಳಿದರು.

ಅವರು ಶನಿವಾರ ಕುಂದಾಪುರ ಪ್ರೆಸ್ ಕ್ಲಬ್‍ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸೆ.30 ಸೋಮವಾರ ಶಾಲೆಯ ಡಾ.ಹೆಚ್.ಶಾಂತಾರಾಮ ರಂಗ ಮಂಟಪದಲ್ಲಿ ಗಿನ್ನಿಸ್ ವಲ್ರ್ಡ್ ರೆಕಾರ್ಡ್ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮ ನಡೆಯಲಿದ್ದು ಎಸ್.ಎಸ್.ಎಸ್ ಟ್ರಸ್ಟ್ ಹಟ್ಟಿಯಂಗಡಿ ಇದರ ಅಧ್ಯಕ್ಷರಾದ ಹೆಚ್.ಗಣೇಶ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯರು, ಕರ್ನಾಟಕ ಸರ್ಕಾರದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ ಕಾರ್ಣಿಕ್, ಮುಖ್ಯ ಅತಿಥಿಗಳಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಟ್ರಸ್ಟಿ ಜಯಾನಂದ ಹೋಬಳಿದಾರ್, ಜನಸೇವಾ ಟ್ರಸ್ಟ್ ಮೂಡುಗಿಳಿಯಾರ ಇದರ ಅಧ್ಯಕ್ಷರಾದ ವಸಂತ ಗಿಳಿಯಾರ್, ಕುಂದಾಪುರ ಭೂಮಾಪನ ಇಲಾಖೆಯ ಎಡಿಎಲ್‍ಆರ್ ಪುಷ್ಪರಾಜ ಪೂಜಾರಿ, ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೆ.ರಾಜೀವ ಶೆಟ್ಟಿ ಭಾಗವಹಿಸಲಿದ್ದಾರೆ. ಎಸ್.ಎಸ್.ಎಸ್ ಪ್ರತಿಷ್ಠಾನ ಹಟ್ಟಿಯಂಗಡಿ ಇದರ ಕಾರ್ಯದರ್ಶಿ, ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ, ಎಸ್.ಎಸ್.ಎಸ್ ಪ್ರತಿಷ್ಠಾನ ಹಟ್ಟಿಯಂಗಡಿ ಇದರ ಟ್ರಸ್ಟಿ , ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿಯಂಗಡಿಯ ಆಡಳಿತಾಧಿಕಾರಿ ವೀಣಾರಶ್ನಿ ಎಂ ಉಪಸ್ಥಿತರಿರಲಿದ್ದಾರೆ ಎಂದರು.

ಅಕ್ಟೋಬರ 1 ಮಂಗಳವಾರ ಮಧ್ಯಾಹ್ನ 1.45ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜು (ಸ್ವಾಯತ್ತ) ಇದರ ರಿಜಿಸ್ಟ್ರಾರ್ ಡಾ.ಎನ್.ಪಿ ನಾರಾಯಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷರಾದ ಕೆ.ಜಯಪ್ರಕಾಶ ಹೆಗ್ಡೆ, ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೊಲ್ಲೂರು ದೇವಸ್ಥಾನದ ಆಡಳಿತ ಟ್ರಸ್ಟಿ ರಾಜೇಶ ಕಾರಂತ್ ಯು., ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಭೀಮಾಶಂಕರ ಸಿನ್ನಾರ, ನ್ಯಾಯವಾದಿ ಟಿ,ಬಿ ಶೆಟ್ಟಿ, ತಲ್ಲೂರು ಗ್ರಾಮ ಪಂಚಾಯತ್ ಅದ್ಯಕ್ಷರಾದ ಗಿರೀಶ್ ಎಸ್.ನಾಯ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಎಸ್.ಎಸ್.ಎಸ್ ಪ್ರತಿಷ್ಠಾನ ಹಟ್ಟಿಯಂಗಡಿ ಇದರ ಕಾರ್ಯದರ್ಶಿ, ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ, ಎಸ್.ಎಸ್.ಎಸ್ ಪ್ರತಿಷ್ಠಾನ ಹಟ್ಟಿಯಂಗಡಿ ಇದರ ಟ್ರಸ್ಟಿ , ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿಯಂಗಡಿಯ ಆಡಳಿತಾಧಿಕಾರಿ ವೀಣಾರಶ್ನಿ ಎಂ ಉಪಸ್ಥಿತರಿರುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಿದ್ಧಿವಿನಾಯಕ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸುಜಾತ ಸದಾನಂದ, ಸಹಶಿಕ್ಷಕಿ ಲತಾ ದೇವಾಡಿಗ, ಮಾದೇವ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!