spot_img
Thursday, March 20, 2025
spot_img

ಬಾಲಿವುಡ್‌ ನಟ ಮಿಥುನ್‌ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ !

ಜನಪ್ರತಿನಿಧಿ (ನವ ದೆಹಲಿ) : ಸಿನೆಮಾ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಬಾಲಿವುಡ್‌ ನಟ ಮಿಥುನ್‌ ಚಕ್ರವರ್ತಿ ಅವರನ್ನು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು(ಸೋಮವಾರ) ಘೋಷಣೆ ಮಾಡಿದೆ.

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ ಸಿನೆಮಾ ಕ್ಷೇತ್ರಕ್ಕೆ ಮಿಥುನ್‌ ಅವರು ನೀಡಿರುವ ಕೊಡುಗೆ ಮುಂದಿನ ತಲೆಮಾರಿನವರಿಗೆ ಸ್ಪೂರ್ತಿ. ಭಾರತೀಯ ಚಿತ್ರರಂಗಕ್ಕೆ ಅವರು ನೀಡಿದ ಅಪಾರ ಕೊಡುಗೆಗಾಗಿ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿಯಿ ಅವರನ್ನು ಆಯ್ಕೆ ಮಾಡಿದ್ದು, ಸಂತಸದ ಸಂಗತಿ ಎಂದು ಹೇಳಿದ್ದಾರೆ.

ಅಕ್ಟೋಬರ್‌ ೮ ರಂದು ನಡೆಯುವ ೭೦ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಮಿಥನ್‌ ಚಕ್ರವರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೈಷ್ಣವ್‌ ತಿಳಿಸಿದ್ದಾರೆ.

೧೯೭೬ರಲ್ಲಿ  ಮೃಣಾಲ್‌ ಸೇನ್‌ ಅವರ ಮೃಗಾಯಾ ಚಿತ್ರ ಮೂಲಕ ಸಿನೆಮಾ ಕ್ಷೇತ್ರಕ್ಕೆ ಮಿಥುನ್‌ ಪಾದಾರ್ಪಣೆ ಮಾಡಿದ್ದರು. ಈ ಚಿತ್ರದಲ್ಲಿ ಅತ್ಯುತ್ತಮ ನಟನೆಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೂ ಭಾಜನರಾಗಿದ್ದರು.

ಸುರಕ್ಷಾ, ಡಿಸ್ಕೋ ಡ್ಯಾನ್ಸರ್‌, ಕಮಾಂಡೋ, ಕಸಂ ಪೈಡಾ ಕರ್ನೆ ವಾಲೆ ಕಿ ಸೇರಿದಂತೆ ೩೫೦ಕ್ಕೂ ಹೆಚ್ಚು ಚಿತ್ರಗಳಲ್ಲಿ ಮಿಥುನ್‌ ನಟಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!