Saturday, October 12, 2024

ಸಿದ್ದರಾಮಯ್ಯನವರೇ ನೀವು ಹಾದಿ ತಪ್ಪಿಸುವುದರಲ್ಲಿ “ಎಕ್ಸ್ ಪರ್ಟ್” ! : ಶಾಸಕ ಸುನೀಲ್‌ ಕುಮಾರ್‌ ಕಾರ್ಕಳ

ಜನಪ್ರತಿನಿಧಿ (ಬೆಂಗಳೂರು/ಕಾರ್ಕಳ) : ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನೀವು ಹಾದಿ ತಪ್ಪಿಸುವುದರಲ್ಲಿ “ಎಕ್ಸ್ ಪರ್ಟ್” !ಇಡಿ ಕರ್ನಾಟಕವನ್ನು ನಾಲ್ಕು ದಶಕಗಳಿಂದ ಹಾದಿ ತಪ್ಪಿಸುತ್ತಲೇ ಬಂದಿದ್ದೀರಿ. ರಾಮಕೃಷ್ಣ ಹೆಗಡೆ, ದೇವೇಗೌಡ, ಎಸ್.ಎಂ.ಕೃಷ್ಣರಂಥ ಘಟಾನುಘಟಿಗಳ ಪಥವನ್ನೇ ಬದಲಿಸಿದ ನಿಮಗೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದಾದರೂ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಬೇಕಿದೆ.ಮುಡಾ ವಿಚಾರದಲ್ಲಿ ಸಂಕಷ್ಟ ಎದುರಾಗುತ್ತಿದ್ದಂತೆ ನೀವು ಜಾತಿ ಗಣತಿ ವಿಚಾರವನ್ನು ಮುಂದಿಟ್ಟುಕೊಂಡು ಹಿಂದುಳಿದ ಹಾಗೂ ಶೋಷಿತ ವರ್ಗದ ದಿಕ್ಕು ತಪ್ಪಿಸಲು ಹೊರಟಿದ್ದೀರಿ ಎಂದು ಶಾಸಕ ಸುನೀಲ್‌ ಕುಮಾರ್‌ ಕಾರ್ಕಳ ಹೇಳಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಅವರು, ಎಷ್ಟು ದಿನ ಈ ನಾಟಕ ಸ್ವಾಮಿ? ಅಧಿಕಾರಕ್ಕೆ ಬಂದಾಗಿನಿಂದ ಜಾತಿ ಗಣತಿ ಅನುಷ್ಠಾನ ಮಾಡುತ್ತೇನೆ ಎಂದು ಹೇಳುತ್ತಲೇ ಬಂದಿದ್ದೀರೇ ವಿನಾ ಆ ದಿಶೆಯಲ್ಲಿ ಒಂದೇ ಒಂದು ಹೆಜ್ಜೆ ಮುಂದಿಟ್ಟಿಲ್ಲ.ಹಲವು ಕಾರಣದಿಂದ ಜಾರಿಯಾಗಿಲ್ಲ ಎಂದು ಮಗುಮ್ಮಾಗಿ ಹೇಳಿದರೆ ಸಾಕೆ?ಆ ಕಾರಣವನ್ನು ಬಹಿರಂಗಪಡಿಸಿ.ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಭಯವೇ? ಎಂದು ಪ್ರಶ್ನಿಸಿದ್ದಾರೆ.

ಅಥವಾ ವರದಿಯಲ್ಲಿ ಲೋಪಗಳಿವೆಯೇ ? ಯಾವುದನ್ನೂ ಸ್ಪಷ್ಟಪಡಿಸದೇ ” ಜಾರಿ ಜಪ” ಎಷ್ಟು ವರ್ಷ ಮುಂದುವರಿಸುತ್ತೀರಿ ? ಸಂಕಟ ಬಂದಾಗಲೆಲ್ಲ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಜಾರಿ,  ಅಹಿಂದ ವರ್ಗಕ್ಕೆ ಅನ್ಯಾಯ ಎಂದು ಭಾಷಣ ಬಿಗಿದು ಬಚಾವ್ ಆಗುವುದು ನಿಮಗೆ ಚಾಳಿಯಾಗಿ ಬಿಟ್ಟಿದೆ. ಪೊಲೀಸ್ ಭಾಷೆಯಲ್ಲಿ ಹೇಳಬೇಕೆಂದರೆ ಇದು ವೃತ್ತಿಪರ ಅಪರಾಧಿ ಎಸಗುವ ” ಗಮನ ಸೆಳೆಯುವ ತಂತ್ರ” ಎನ್ನದೇ ವಿಧಿ ಇಲ್ಲ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!