spot_img
Wednesday, April 1, 2026
spot_img

ಸದ್ಯಕ್ಕೆ ರಾಜೀನಾಮೆ ನೀಡುವ ಯೋಚನೆ ಇಲ್ಲ, ಸಿದ್ದರಾಮಯ್ಯ ಅವರೇ ನನ್ನ ಹೈಕಮಾಂಡ್ : ಮರೀಗೌಡ

ಜನಪ್ರತಿನಿಧಿ (ಮೈಸೂರು) : ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಎಂದಿಗೂ ದ್ರೋಹ ಬಗೆಯುವ ಕೆಲಸ ಮಾಡುವುದಿಲ್ಲ. ಸಿದ್ದರಾಮಯ್ಯ ನನ್ನ ಮನೆ ದೇವರು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಸ್ಪಷ್ಟನೆ ನೀಡಿದರು.

ಇಂದು(ಸೋಮವಾರ) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ, ಸಿದ್ದರಾಮಯ್ಯ ಅವರ ಇಂದಿನ ಸ್ಥಿತಿಗೆ ನಾನೇ ಕಾರಣ ಎಂದು ಆರೋಪಿಸಿ ಕಾಂಗ್ರೆಸ್‌ನ ಕೆಲವು ಕಾರ್ಯಕರ್ತರು ಕಳೆದ ಶುಕ್ರವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ನನ್ನ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದರು. ಸ್ವಪಕ್ಷೀಯರ ಈ ಗಲಾಟೆ ತೀವ್ರ ನೋವು ತಂದಿದೆ ಎಂದು ಅವರು ಹೇಳಿದ್ದಾರೆ.

೫೦:೫೦ ನಿವೇಶನಗಳ ಹಂಚಿಕೆ ಆಗಿರುವುದು ೨೦೨೦ರಿಂದ. ನಾನು ಮುಡಾ ಅಧೈಕ್ಷ ಆಗಿದ್ದು ೨೦೨೪ರ ಮಾರ್ಚ್‌ ೧ ರಿಂದ. ಹೀಗಾಗಿ ಹಿಂದಿನ ಪ್ರಕರಣಗಳಿಗೂ ನನಗೂ ಸಂಬಂಧ ಇಲ್ಲ ಎಂದರು.

ಸದ್ಯಕ್ಕೆ ರಾಜೀನಾಮೆ ನೀಡುವ ಯೋಚನೆ ಇಲ್ಲ. ಸಿದ್ದರಾಮಯ್ಯ ಅವರೇ ನನ್ನ ಹೈಕಮಾಂಡ್.‌ ಅವರು ರಾಜೀನಾಮೆಗೆ ಸೂಚಿಸಿದರೇ ರಾಜೀನಾಮೆಗೂ ಸಿದ್ದನಿದ್ದೇನೆ ಎಂದು ಅವರು ಹೇಳಿದ್ದಾರೆ.

ಸ್ವತಃ ಸಿದ್ದರಾಮಯ್ಯ ಅವರೇ ನಿನ್ನ ಅವಧಿಯಲ್ಲಿ ಏನೂ ಆಗಿಲ್ಲವೆಂದು ನನ್ನನ್ನು ಸಮಧಾನ ಪಡಿಸಿದ್ದಾರೆ. ಸ್ವಪಕ್ಷೀಯರು ನನ್ನ ತೇಜೋವಧೆ ಮಾಡುವುದನ್ನು ಇನ್ನಾದರೂ ಬಿಡಬೇಕು. ಸಮುದಾಯದ ಮುಖಂಡರು ನನ್ನ ಮೇಲಿರುವ ತಪ್ಪು ಕಲ್ಪನೆಯನ್ನು ಬಿಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!