Sunday, October 13, 2024

ರಾಜ್ಯ ಸರ್ಕಾರ ಉರುಳಿಸಲು ಒಂದು ಸಾವಿರ ಕೋಟಿ ರೂ. ಮೀಸಲು ! : ಯತ್ನಾಳ್‌ ಹೇಳಿಕೆ ಬಗ್ಗೆ ಐಟಿ ತನಿಖೆಯಾಗಲಿ : ಡಿಸಿಎಂ ಡಿಕೆಶಿ

ಜನಪ್ರತಿನಿಧಿ (ಬೆಂಗಳೂರು) : ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ನೀಡಿರುವ ರಾಜ್ಯ ಸರ್ಕಾರವನ್ನು ಉರುಳಿಸಲು ಒಂದು ಸಾವಿರ ಕೋಟಿ ಮೀಸಲಿಡಲಾಗಿದೆ ಎಂಬ ಹೇಳಿಕೆಯ ಬಗ್ಗೆ ಆದಾಯ ತೆರಿಗೆ (ಐಟಿ) ಇಲಾಖೆ ತನಿಖೆ ನಡೆಸಬೇಕೆಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಒತ್ತಾಯಿಸಿದ್ದಾರೆ.

ವರದಿಗಾರರರಿಗೆ ಪ್ರತಿಕ್ರಿಯಿಸಿದ ಮಾತನಾಡಿದ ಡಿಕೆಶಿ, ಈ ಕುರಿತು ಈಗಾಗಲೇ ಹೈಕಮಾಂಡ್‌ ಗಮನಕ್ಕೆ ತರಲಾಗಿದೆ. ಪಕ್ಷ ಹಾಗೂ ಸರ್ಕಾರ ಉರುಳಿಸಲು ಈ ಕೆಲಸ ಮಾಡಲಾಗುತ್ತಿದೆ. ಈ ವಿಚಾರವಾಗಿ ನಮ್ಮ ಕಾನೂನು ಸಲಹೆಗಾರರ ಬಳಿಯೂ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಇನ್ನು, ಇಂದು ಗೃಹ ಸಚಿವರಾದ ಜಿ. ಪರಮೇಶ್ವರ ಜೊತೆಗಿನ ಭೇಟಿ ವಿಚಾರವಾಇ ಪ್ರತಿಕ್ರಿಯಿಸದ ಅವರು, ಪರಮೇಶ್ವರ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ನಾವು ರಾಜಖೀಯ ಚರ್ಚೆ ಮಾಡಿಲ್ಲ ಎಂದರು.

ಅಧಿಕಾರಕ್ಕೆ ಬಂದಿದ್ದು ರಾಜ್ಯದ ಅಭಿವೃದ್ಧಿ ಮಾಡುವುದಕ್ಕಾಗಿ. ದಿನಲೂ ರಾಜಕೀಯ ಮಾಡುತ್ತಲೇ ಇರುತ್ತೇವೆ. ನಾವು ಅಭಿವೃದ್ಧಿ ಮಾಡಬೇಕಲ್ಲವೇ ? ಎಂದು ಪ್ರಶ್ನಿಸಿದ್ದಲ್ಲದೇ ನಾನು ಹಾಗೂ ಪರಮೇಶ್ವರ್‌ ಮಾತ್ರ ಸಿದ್ದರಾಮಯ್ಯ ಅವರೊಂದಿಗೆ ಇರುವುದಲ್ಲ ಚುನಾವಣೆಯಲ್ಲಿ ಗೆದ್ದ ೧೩೬ ಶಾಸಕರೂ ಸಿದ್ದರಾಮಯ್ಯ ಅವರೊಂದಿಗೆ ಇದ್ದೇವೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!