Sunday, October 13, 2024

ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಿಂದ ಪರಿಷತ್ ಉಪ ಚುನಾವಣೆ ಬಹಿಷ್ಕಾರ

ಕುಂದಾಪುರ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೈಂದೂರು ತಾಲೂಕು ಜಡ್ಕಲ್ ಗ್ರಾಮ ಪಂಚಾಯತ್ ನ ಎಲ್ಲಾ 18 ಸದಸ್ಯರು ಗ್ರಾಮಸ್ಥರ ಹಿತದೃಷ್ಟಿಯಿಂದ ಇದೇ ಅಕ್ಟೋಬರ್ 21ರಂದು ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಮತ ಚಲಾಯಿಸದೇ ಚುನಾವಣಾ ಬಹಿಷ್ಕಾರ ಮಾಡುವ ನಿರ್ಣಯ ಮಾಡಿದ್ದಾರೆ.

ಪರಿಸರ ಸೂಕ್ಷ್ಮ ಪ್ರದೇಶ, ಬಫರ್ ಝೋನ್ ಶೂನ್ಯಕ್ಕೆ ಇಳಿಸುವುದು, ಈಗಾಗಲೇ ಪರಿಸರ ಸೂಕ್ಷ್ಮ ಪ್ರದೇಶದ ಬಗ್ಗೆ ಹೊರಡಿಸಿರುವ ಸುತ್ತೋಲೆಯನ್ನು ಮೂಕಾಂಬಿಕಾ ಅಭಯಾರಣ್ಯದ ಸೂಕ್ಷ್ಮ ಪ್ರದೇಶ ಎಂಬ ನೆಪದಿಂದ ಸಕ್ಷಮ ಪ್ರಾಧಿಕಾರದಿಂದ ವಾಣಿಜ್ಯ ಭೂ-ಪರಿವರ್ತನೆಗೆ ಪೂರ್ವಾನುಮತಿಯನ್ನು (ಯೋಜನಾ ಪ್ರಾಧಿಕಾರ ಉಡುಪಿ) ಪಡೆಯುವ ಸೂಚನೆ ರದ್ದುಗೊಳಿಸುವುದು ಈ ಬೇಡಿಕೆಯನ್ನು ಮುಂದಿಟ್ಟು ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರು ವಿಧಾನ ಪರಿಷತ್ ಚುನಾವಣೆ 2024 ಬಹಿಷ್ಕಾರ ಮಾಡಲು ತೀರ್ಮಾನಿಸಿದ್ದಾರೆ.

ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಾದ ಪಾರ್ವತಿ, ಭಾರತಿ ಜಿ.ಶೆಟ್ಟಿ, ವನಜಾಕ್ಷಿ ಎಸ್.ಶೆಟ್ಟಿ, ಲಕ್ಷ್ಮಣ ಶೆಟ್ಟಿ, ಕೆ.ವಿದ್ಯಾವತಿ ಕನ್ನಂತ, ನಾರಾಯಣ ಶೆಟ್ಟಿ, ವಿ.ಜೆ ದೇವದಾಸ್, ಲಕ್ಷ್ಮೀ ಎಸ್.ಚಂದನ್, ಶ್ರೀಮತಿ, ಚಂದ್ರಮೋಹನ್, ಸೂಲ್ಯ ಬೋವಿ, ಸುಂದರನಾರಾಯಣ, ಸುನೀತಾ, ಮಂಜು, ಶ್ರೀನಿವಾಸ, ಸವಿತಾ, ಪಾರ್ವತಿ, ನಾಗೇಶ ಗ್ರಾಮಸ್ಥರ ಹಿತದೃಷ್ಟಿಯಿಂದ ವಿಧಾನ ಪರಿಷತ್ ಉಪ ಚುನಾವಣೆ ಬಹಿಷ್ಕಾರದ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!