Saturday, October 12, 2024

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಕುಸ್ತಿ ಪಂದ್ಯಾಟ ಸಂಪನ್ನ

ಹೆಮ್ಮಾಡಿ; ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟ ಜನತಾ ಕ್ರೀಡಾಂಗಣ ಹೆಮ್ಮಾಡಿಯಲಿ ಅದ್ದೂರಿಯಾಗಿ ನಡೆಯಿತು.
ಅಂತಾರಾಷ್ಟ್ರೀಯ ಕಿವುಡರ ಟಿ-20 ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದ ಭಾರತ ತಂಡದ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಹುಂಚನಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ  ಗಣೇಶ ಮೊಗವೀರರವರು ಮಾತನಾಡಿ ಕ್ರೀಡಾ ಪ್ರತಿಭೆಗಳ ವಿಕಾಸಕ್ಕೆ ಅದ್ಭುತ ವೇದಿಕೆಗಳನ್ನು ಒದಗಿಸಿಕೊಡುತ್ತಿದ್ದೇವೆ ಆ ಮುಖೇನ ಕ್ರೀಡಾ ರಂಗದಲ್ಲಿ ಕಾಲೇಜು ರಾಜ್ಯ,ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ.ಪ್ರತಿಭೆ ತುಂಬಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದೇ ನಮ್ಮ ಉದ್ದೇಶ ಸೋಲೇ ಗೆಲುವಿನ ಸೋಪಾನ ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್.ವಿ.ಗಂಗೊಳ್ಳಿ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕರಾದ ಶ್ರೀ ನಾಗರಾಜ ಶೆಟ್ಟಿಯವರು ಮಾತನಾಡಿ.ಕ್ರೀಡಾ ರಂಗಕ್ಕೆ ಜನತಾ ಪದವಿಪೂರ್ವ ಕಾಲೇಜಿನ ಕೊಡುಗೆ ಅಭೂತಪೂರ್ವವಾದದ್ದು,ಕ್ರೀಡಾ ಪ್ರತಿಭೆಗಳು ಅರಳಲು ಪ್ರೋತ್ಸಾಹವೇ ಸ್ಪೂರ್ತಿ ಆ ಕಾರ್ಯವನ್ನು ಜನತಾ ಪದವಿಪೂರ್ವ ಕಾಲೇಜು ಪ್ರಾಮಾಣಿಕವಾಗಿ ಮಾಡುತ್ತಿರುವುದು ನಮಗೆಲ್ಲರಿಗೂ ಸಂತಸ ತಂದಿದೆ ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಶ್ರೀ ಜೀವನ್ ಕುಮಾರ್ ಶೆಟ್ಟಿಯವರು ಮಾತನಾಡಿ ಪದವಿಪೂರ್ವ ಶಿಕ್ಷಣ ಇಲಾಖೆಯ ವಿವಿಧ ಸ್ಪರ್ಧೆಗಳನ್ನು ಬಹಳಷ್ಟು ಅದ್ಭುತ ರೀತಿಯಲ್ಲಿ ಆಯೋಜನೆ ಮಾಡುತ್ತಿರುವ ಜನತಾ ಪದವಿಪೂರ್ವ ಕಾಲೇಜಿನ ತಂಡಕ್ಕೆ ಶ್ಲಾಘನೆಯನ್ನು ವ್ಯಕ್ತಪಡಿಸಿದರು.

ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿ  ಸುಕೇಶ ಶೆಟ್ಟಿ ಯವರು ಮಾತನಾಡಿ ಕುಸ್ತಿ ಇದೊಂದು ಪ್ರಾಚೀನ ಕ್ರೀಡೆ ಶಕ್ತಿ ಮತ್ತು ಯುಕ್ತಿಯೇ ಕುಸ್ತಿ ಎನ್ನುವುದರ ಮೂಲಕ ಶುಭ ಹಾರೈಸಿದರು.ಸಮಾರಂಭದಲ್ಲಿ ತಾಲೂಕು ಸಂಯೋಜಕರಾದ  ರಾಮ ಶೆಟ್ಟಿ, ಕುಂದಾಪುರ ಸಿಟಿ ಜೆಸಿ‌ಐ ಅಧ್ಯಕ್ಷರಾದ  ರಾಘವೇಂದ್ರ ಕುಲಾಲ್,ಜನತಾ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ  ಮಂಜು ಕಾಳಾವರ,ಜನತಾ ಪದವಿಪೂರ್ವ ಕಾಲೇಜಿನ ಉಪ-ಪ್ರಾಂಶುಪಾಲರಾದ  ರಮೇಶ ಪೂಜಾರಿ,ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಖ್ಯ ಶಿಕ್ಷಕಿ ಕು|ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು,ದೈಹಿಕ ಶಿಕ್ಷಣ ಉಪನ್ಯಾಸಕರು, ವಿದ್ಯಾರ್ಥಿ ಪೋಷಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕಾಲೇಜಿನ ಹಿಂದಿ ಉಪನ್ಯಾಸಕ ಶ್ರೀ ಉಮೇಶ ನಾಯ್ಕ ಸ್ವಾಗತಿಸಿ ,ಉಪನ್ಯಾಸಕಿ ಶ್ರೀಮತಿ ಪ್ರಿಯಾಂಕ ಕಾರ್ಯಕ್ರಮ ನಿರೂಪಿಸಿ.ಉಪನ್ಯಾಸಕ ಅಭಿಜಿತ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!