spot_img
Saturday, June 21, 2025
spot_img

ಕೋಟೇಶ್ವರ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಟಿಪ್ಪರ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕುಂದಾಪುರ: ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ನಡೆದಿದೆ.

ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರೀ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿ‌ಎಸ್ಸಿ ವಿದ್ಯಾರ್ಥಿ ಧನುಷ್ ಮೃತ ಪಟ್ಟ ದುರ್ದೈವಿ. ಈತ ನಾಗೂರು ನಿವಾಸಿ ಎಂದು ಗುರುತಿಸಲಾಗಿದೆ,

ಧನುಷ್ ತನ್ನ ಸ್ನೇಹಿತರೊಂದಿಗೆ ಕಾಲೇಜಿನಿಂದ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಬರುತ್ತಿದ್ದ. ಅತೀ ವೇಗವಾಗಿ ಹಿಂದಿನಿಂದ ಬಂದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ತೀರಾ ಬಲಬದಿಗೆ ಬಂದು ಧನುಷ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಧನುಷ್ ಟಿಪ್ಪರ್ ಅಡಿಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಕುಂದಾಪುರ ಸಂಚಾರೀ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!