Friday, October 18, 2024

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕರಣವನ್ನು ಯಾವ ಆಧಾರದ ಮೇಲೆ ದಾಖಲಿಸಲಾಗಿದೆ ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಜನಪ್ರತಿನಿಧಿ  (ಬೆಂಗಳೂರು) : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಪ್ರಕರಣ ದಾಖಲಾಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕರಣವನ್ನು ಯಾವ ಆಧಾರದ ಮೇಲೆ ದಾಖಲಿಸಲಾಗಿದೆ ? ಯಾವ ರೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣ ಎಂಬುದು ನನಗೆ ಗೊತ್ತಿಲ್ಲ. ಬಹುಶಃ ನಿಮಗೂ ಹಾಗೆಯೇ ಅನಿಸುತ್ತಿರಬಹುದು. ನನ್ನ ಪ್ರಕಾರ, ಪರಿಹಾರದ ಸೈಟ್‌ಗಳನ್ನು ನೀಡಿದ್ದರಿಂದ ಅದು ಮನಿ ಲಾಂಡ್ರಿಂಗ್ ಪ್ರಕರಣ ಆಗುವುದಿಲ್ಲ, ಇದರಲ್ಲಿ ನನ್ನ ಪಾತ್ರ ಏನಿದೆ ಎಂದು ಪ್ರಶ್ನಿಸಿದ್ದಾರೆ.

ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ದಿಂದ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ವಿರುದ್ಧ ಪೊಲೀಸರು ಎಫ್‌ಐಆರ್‌ಗೆ ಸಮನಾದ ಎನ್‌ಫೋರ್ಸ್‌ಮೆಂಟ್ ಕೇಸ್ ಮಾಹಿತಿ ವರದಿಯನ್ನು (ECIR) ಇಡಿ ದಾಖಲಿಸಿದೆ.

ರಾಜೀನಾಮೆ ಇಲ್ಲ:  ನಾನು ಆತ್ಮಸಾಕ್ಷಿಯೊಂದಿಗೆ ಕೆಲಸ ಮಾಡುತ್ತೇನೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ನನ್ನ ಆತ್ಮಸಾಕ್ಷಿ ಹೇಳುತ್ತಿದೆ. ಹಾಗಾಗಿ ನಾನು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ವಿವಾದಕ್ಕೆ ಬೇಸರಗೊಂಡು ನಿವೇಶನ ಹಿಂತಿರುಗಿಸಲು ನಿರ್ಧಾರ: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ, ಆದರೂ ಇಷ್ಟೊಂದು ವಿವಾದ ಆಗಿದೆ, ಹೀಗಾಗಿ ಮನನೊಂದು ನನ್ನ ಪತ್ನಿ ನಿವೇಶನ ಹಿಂತಿರುಗಿಸುವ ತೀರ್ಮಾನ ಮಾಡಿ ಪತ್ರ ಬರೆದಿದ್ದಾರೆ ಎಂದು ಹೇಳಿದರು.

ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದು, ನನ್ನ ಜೊತೆ ಚರ್ಚೆ ಮಾಡಿಲ್ಲ, ಮುಡಾದವರಿಗೆ ಪತ್ರ ಕಳುಹಿಸಿದ ನಂತರವೇ ನನಗೆ ಗೊತ್ತಾಗಿದ್ದು. ಅವರ ಅಣ್ಣ ಮಲ್ಲಿಕಾರ್ಜುನ ಸ್ವಾಮಿ 3 ಎಕ್ರೆ 16 ಗುಂಟೆ ಜಮೀನು ನನ್ನ ಪತ್ನಿಗೆ ನೀಡಿದ್ದು, ನಂತರ ಆಕೆ ಮಾಲಿಕಳಾದ್ದಳು. ಮುಡಾದವರು ಜಮೀನು ವಶಪಡಿಸಿಕೊಂಡು ನಿವೇಶನ ಮಾಡಿ ಹಂಚಿದ್ದರು. ಅದಕ್ಕೆ ಬದಲಿ ನಿವೇಶನ ನೀಡಿ ಎಂದು ಕೇಳಿದಾಗ ವಿಜಯನಗರ 3 ಮತ್ತು 4ನೇ ಹಂತದಲ್ಲಿ 14 ಸೈಟ್ ನೀಡಿದರು. ನಾವು ವಿಜಯನಗರದಲ್ಲಿಯೇ ನೀಡಬೇಕೆಂದು ಕೇಳಿರಲಿಲ್ಲ. ನಮಗೆ ಬದಲಿ ನಿವೇಶನ ಕೊಡಿ ಎಂದು ಕೇಳಿದ್ದೆವು ಅಷ್ಟೆ, ಅದೀಗ ದೊಡ್ಡ ವಿವಾದವಾಗಿದೆ ಅಷ್ಟೆ ಎಂದು ಹೇಳಿದರು.

ಇಷ್ಟೊಂದು ವಿವಾದಗಳಿಂದ, ವಿರೋಧ ಪಕ್ಷಗಳ ಕುತಂತ್ರಗಳಿಗೆ ನನ್ನ ಪತ್ನಿ ಬಲಿಯಾಗಿದ್ದಾಳೆ ಅಷ್ಟೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!