Saturday, October 12, 2024

ಸಹವಾಸ ದೋಷ, ಆಕಸ್ಮಿಕ ಆಕರ್ಷಣೆ ಬದುಕು ವಿನಾಶಕ್ಕೆ ಕಾರಣ-ನರೇಂದ್ರ ಗಂಗೊಳ್ಳಿ

ಗಂಗೊಳ್ಳಿ : ಮದ್ಯವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆಯ ಜೀವನ ಹಾಳಾಗುತ್ತಿದೆ. ದುಶ್ಚಟಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾ ಬೀರುತ್ತದೆ. ಸಹವಾಸ ದೋಷ, ಆಕಸ್ಮಿಕ ಆಕಷಣೆಗಳ ಕಾರಣ ದುಶ್ಚಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ ಇದರಿಂದ ವೈಯಕ್ತಿಕ ಜೀವನದ ಜೊತೆ ಜೊತೆಗೆ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ. ಹಾಗಾಗಿ ವಿದ್ಯಾರ್ಥಿ ಜೀವನದ ದೆಸೆಯಿಂದಲೇ ಉತ್ತಮ ಕ್ರಿಯಾಶೀಲ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು ಎಂದು ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬೈಂದೂರು ತಾಲೂಕು, ತಾಲೂಕು ಜನಜಾಗೃತಿ ವೇದಿಕೆ ಬೈಂದೂರು ಹಾಗೂ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಜರಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಮಾತನಾಡಿ, ಉತ್ತಮ ಆರೋಗ್ಯ ಇದ್ದರೆ ಏನನ್ನಾದರೂ ಸಾಧಿಸಬಹುದು. ಹಾಗಾಗಿ ಯಾರು ದುಶ್ವಟಗಳಿಗೆ ಬಲಿಯಾಗಬಾರದು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ದುಶ್ಚಟ ಮುಕ್ತ ಸಮಾಜದ ನಿರ್ಮಾಣ ನಮ್ಮೆಲ್ಲರ ಹೊಣೆ ಎಂಬ ಧ್ಯೇಯದೊಂದಿಗೆ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಕುರಿತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದರು.
ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮತ್ತು ತ್ರಾಸಿ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಪ್ರಮೀಳಾ ಗಾಣಿಗ ಶುಭಾಶಂಸನೆಗೈದರು. ಗಂಗೊಳ್ಳಿ ಎಂ.ಜಿ. ಬಂದರು ಒಕ್ಕೂಟದ ಅಧ್ಯಕ್ಷೆ ಬೇಬಿ, ಸೇವಾ ಪ್ರತಿನಿಧಿಗಳಾದ ಸರಸ್ವತಿ, ವನಜಾ ಪೂಜಾರಿ, ರತ್ನಿ, ರಾಧಾ ಪೂಜಾರಿ ಉಪಸ್ಥಿತರಿದ್ದರು.
ತ್ರಾಸಿ ವಲಯ ಮೇಲ್ವಿಚಾರಕ ಚಂದ್ರು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!