spot_img
Tuesday, March 31, 2026
spot_img

ಗಾಂಧಿ ಸರ್ವೋದಯ, ಅಂಬೇಡ್ಕರ್ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಮಹಾತ್ಮ ಗಾಂಧಿ ಅವರು ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು  ಅರ್ಥ ಮಾಡಿಕೊಂಡು, ಬಳಿಕ‌ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿದರು. ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ಬಿಬಿಎಂಪಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ 1947 ರಲ್ಲಿ ಬ್ರಿಟಿಷರು ಭಾರತದಿಂದ ಹೋಗುವಂತೆ ಮಾಡಿದರು. ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ‌ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ ಎಂದು ಅವರು ಹೇಳಿದರು.

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ಧಾರ ಆಗದೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ ಎಂದು ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ. ಆತ್ಮ ಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದದು.  ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!