Tuesday, October 22, 2024

ಕಿತ್ತೂರು ವಿಜಯೋತ್ಸವದ ಜ್ಯೋತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಜನಪ್ರತಿನಿಧಿ (ಬೆಂಗಳೂರು) : ಸ್ವಾಭಿಮಾನ – ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಮಾತನಾಡಿದರು.

ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ ಈಕೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ರಾಣಿಚೆನ್ನಮ್ಮ ಎಂದು ಹೇಳಿದರು.

ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ‌ ಅಭಿವೃದ್ಧಿಗೆ ಸರ್ಕಾರ ಸಕಲ ನೆರವನ್ನು ನೀಡುತ್ತಿದೆ. ಅಗತ್ಯ ಅನುದಾನವನ್ನೂ ನೀಡುತ್ತಿದೆ. ಈ ವಿಜಯ ಜ್ಯೋತಿ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಹಾದು ಹೋಗಲಿದೆ ಎಂಬುದು ವಿಶೇಷ ಸಂಗತಿ ಎಂದರು.

ಇಂದು ಮಹಾತ್ಮ ಗಾಂಧಿಯವರ ಜಯಂತಿ. ಜೊತೆಗೆ ಲಾಲ್ ಬಹದ್ದೂರು ಶಾಸ್ತ್ರಿ ಅವರ ಜನುಮದಿನವೂ ಹೌದು. ಗಾಂಧಿ ನಡಿಗೆ ಮೂಲಕ ಗಾಂಧಿ ತತ್ವಾದರ್ಶಗಳು ಇವತ್ತಿನ ಯುವ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡಿದ್ದೇವೆಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!