Tuesday, October 22, 2024

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಜನಪ್ರತಿನಿಧಿ (ಮೈಸೂರು) : ಮುಡಾ‌ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.

ಮುಡಾಕ್ಕೆ ನಿವೇಶನವನ್ನು ವಾಪಸ್ ಮಾಡಿರುವುದು ನೋಡಿದರೇ ತಪ್ಪಾಗಿದೆ ಎಂದೇ ಅರ್ಥ. ನಿವೇಶನಕ್ಕೆ ಇರುವ ಮೌಲ್ಯಕ್ಕಿಂತ ಐದಾರು ಪಟ್ಟು ಹಣ ಕೇಳಿದ್ದಾರೆ. ಸಿಎಂ ಅವರ ಹೆಸರೇ ಖುದ್ದು‌ ಪ್ರಕರಣದಲ್ಲಿ ಕೇಳಿ ಬಂದಿದೆ. ಆ ಕಾರಣಕ್ಕೆ ಸೂಕ್ತ ತನಿಖೆ ಆಗಲೇಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲೇಬೇಕು. ಇದೊಂದು ಕಪ್ಪುಚುಕ್ಕೆ ತರುವ ವಿಚಾರ. ಅವರು ದುರಾಡಳಿತ ಮಾಡಿದ್ದಾರೆ. ನೇರವಾಗಿ ತಪ್ಪು ಮಾಡಿರುವ ಕಾರಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ ಯದುವೀರ್, ‘ಈ ಹಗರಣ ಸಿಎಂ ಅವರ ಪ್ರತಿಷ್ಠೆಗೆ ಮಸಿ ಬಳಿದಿದ್ದು, ನಿಷ್ಪಕ್ಷಪಾತ ತನಿಖೆಗೆ ಅಧಿಕಾರದಿಂದ ಕೆಳಗಿಳಿದಿರುವುದು ಬಹಳ ಮುಖ್ಯ’ ಎಂದು ಹೇಳಿದ್ದಾರೆ.

ಅಧಿಕಾರಿಗಳ ಮೇಲೆ ಪ್ರಭಾವ ಬೀರುತ್ತಾರೆ. ಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ವಾಲ್ಮೀಕಿ ಹಗರಣದಲ್ಲೂ ಕೂಡ ತಪ್ಪಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲೇಬೇಕು. ಸಿಎಂ ಪತ್ನಿ ಅವರನ್ನು ರಾಜಕೀಯಕ್ಕೆ ತಂದಿಲ್ಲ. ಮುಖ್ಯಮಂತ್ರಿಯಾಗಲಿ, ಮಹಿಳೆಯಗಾಗಲಿ , ಯಾರೇ ಆಗಲಿ ಆರೋಪ ಬಂದಾಗ ಎದುರಿಸಬೇಕು. ಅವರ ಮೇಲೆ ಆರೋಪ ಬಂದಿದೆ ಹಾಗಾಗಿ ಅವರ ಪತ್ನಿ ತನಿಖೆಯಲ್ಲಿ ಭಾಗಿಯಾಗಲೇಬೇಕು. ಮುಡಾದ‌ ಮೂಲ ಉದ್ದೇಶ ಬಡವರಿಗೆ ನಿವೇಶನ ಸಿಗಬೇಕು ಎಂಬುದು. ಆದರೆ ಅದು ಒಂದು ವರ್ಗಕ್ಕೆ ಲಾಭ ಆಗುತ್ತಿದೆ. ಹಾಗಾಗಿ ಸಮಗ್ರ ತನಿಖೆ ಆಗಬೇಕು ಎಂದು ಹೇಳಿದರು.

ಸಿಎಂ ಮೊದಲೇ ನಿವೇಶನ ನೀಡಿದ್ದರೇ ಈ ಸಮಸ್ಯೆ ಆಗುತ್ತಿರಲಿಲ್ಲ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಯದುವೀರ್, ಈಗ ಏನಾಗಿದೆ? ಏನಾಗಿಲ್ಲ ಅಂತ ಪರಾಮರ್ಶೆ ಮಾಡುವ ಸಂದರ್ಭವಲ್ಲ. ತಪ್ಪಂತೂ ಆಗಿದೆ , ಅದನ್ನು ಅವರೇ ಒಪ್ಪಿಕೊಂಡಿದ್ದಾರೆ. ಅವರ ಪ್ರಕರಣದಲ್ಲಿ ಕೈ ಹಾಕಿದ್ದಾರಾ ನೋಡಬೇಕಿದೆ. ಹೀಗಾಗಿ ತಕ್ಷಣ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.

ಇನ್ನು, ತಾಯಿ ಚಾಮುಂಡೇಶ್ವರಿ ಬೆಟ್ಟದ ಪ್ರಾಧಿಕಾರ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಯದುವೀರ್, ಆ ವಿಚಾರ ತಾಯಿ ಚಾಮುಂಡಿಗೆ ಬಿಟ್ಟಿದ್ದು. ನಾವು ಕಾನೂನು, ಸಂವಿಧಾನಾತ್ಮಕವಾಗಿ ಮಾಡುತ್ತೇವೆ. ಉಳಿದದ್ದು ತಾಯಿ ಚಾಮುಂಡಿ ತಾಯಿಯೇ ನಿರ್ಧಾರ ಮಾಡುತ್ತಾಳೆ ಎಂದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!