spot_img
Monday, June 23, 2025
spot_img

ಗಾಂಧಿ ಜಯಂತಿ : ದೇಶಕ್ಕೆ ತಂದೆ ಇಲ್ಲ, ಮಕ್ಕಳಿದ್ದಾರೆ : ಮತ್ತೆ ವಿವಾದಕ್ಕೆ ಸಿಲುಕಿದ ಸಂಸದೆ ಕಂಗನಾ ರಣಾವತ್‌

ಜನಪ್ರತಿನಿಧಿ (ನವದೆಹಲಿ) : ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ನಟಿ, ಸಂಸದೆ ಕಂಗನಾ ರಣಾವತ್ ವಿವಾದಕ್ಕೆ ಕಾರಣವಾಗಿದೆ.

ದೇಶ್ ಕೆ ಪಿತಾ ನಹೀ, ದೇಶ್ ಕೆ ತೋ ಲಾಲ್ ಹೋತೇ ಹೈ. ಧನ್ಯೇ ಹೈ ಭಾರತ್ ಮಾ ಕೆ ಯೇ ಲಾಲ್- ‘ದೇಶಕ್ಕೆ ತಂದೆ ಇಲ್ಲ. ಅದಕ್ಕೆ ಮಕ್ಕಳಿದ್ದಾರೆ ಎನ್ನುವುದರ ಮೂಲಕ ಗಾಂಧೀಜಿ ದೇಶದ ಪಿತಾಮಹ ಅಲ್ಲ ಎನ್ನುವುದನ್ನು ಪರೋಕ್ಷವಾಗಿ ಹೇಳಿದ್ದಲ್ಲದೇ, ಭಾರತಮಾತೆಯ ಈ ಮಕ್ಕಳು ಧನ್ಯರು ಕಂಗನಾ ರಣಾವತ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಬರೆದುಕೊಂಡಿದ್ದಾರೆ.

ಶಾಸ್ತ್ರಿ ಅವರ 120 ನೇ ಜನ್ಮ ವಾರ್ಷಿಕೋತ್ಸವದಂದು ನಟಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪೋಸ್ಟ್‌ನಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸ್ಥಾನಮಾನವನ್ನು ಕಾಂಗ್ರೆಸ್ ಕಡಿಮೆ ಮಾಡಿದೆ ಎಂದು ಹೇಳಿದ್ದಾರೆ. ಬಿಜೆಪಿ ಸಂಸದೆ ಕೊಟ್ಟಿರುವ ಹೇಳಿಕೆಯನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ. ಇನ್ನೊಂದೆಡೆ ಪಂಜಾಬ್‌ನ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಕೂಡಾ ಕಂಗನಾ ಹೇಳಿಕೆ ಟೀಕಿಸಿದ್ದಾರೆ.

ಮತ್ತೊಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ಮಂಡಿ ಸಂಸದೆ ದೇಶದಲ್ಲಿ ಗಾಂಧಿಯವರ ಸ್ವಚ್ಛತೆಯ ಪರಂಪರೆಯನ್ನು ಮಂದುವರಿಸಿದಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ.

ಬಾಲಿವುಡ್‌ನಿಂದ ರಾಜಕೀಯಕ್ಕೆ ಪಾದಾರ್ಪಣೆ ಮಾಡಿರುವ ಸಂಸದೆ ಕಂಗನಾ ರಣಾವತ್ ಅವರ ಸಿನಿಮಾ ಮತ್ತು ರಾಜಕೀಯ ಹೇಳಿಕೆಗಳು ದೇಶಾದ್ಯಂತ ಸುದ್ದಿ ಮಾಡುತ್ತಿವೆ. ಸಂಸದೆಯಾದ ನಂತರ ಅವರು ಕ್ಷೇತ್ರದ ಅಭಿವೃದ್ಧಿ, ಬಿಜೆಪಿಯನ್ನು ಬಲಪಡಿಸುವ ಬಗ್ಗೆ ಮಾತನಾಡುವ ಬದಲು ಪಕ್ಷಕ್ಕೆ ಸಂಕಷ್ಟ ತಂದೊಡ್ಡುತ್ತಿದ್ದಾರೆ. 2020 ರಲ್ಲಿ ರೈತರ ಆಂದೋಲನದ ನಂತರ ಹಿಂತೆಗೆದುಕೊಂಡ 3 ಕೃಷಿ ಕಾನೂನುಗಳನ್ನು ಮತ್ತೆ ಜಾರಿಗೆ ತರುವುದಾಗಿ ಹೇಳುವ ಮೂಲಕ ಎನ್‌ಡಿಎ ಸರ್ಕಾರವನ್ನು ಮತ್ತೆ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!