Tuesday, October 22, 2024

ಜನರ ಆಶೀರ್ವಾದ ಇರುವವರೆಗೂ ಯಾರು ಏನೂ ಮಾಡಲು ಸಾಧ್ಯವಿಲ್ಲ : ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು) : ನನ್ನ ಆತ್ಮಸಾಕ್ಷಿ ಪ್ರಕಾರ ನಾನು ನಡೆಯುತ್ತಿದ್ದೇನೆ, ಆತ್ಮಸಾಕ್ಷಿಗೆ ಅನುಗುಣವಾಗಿ ನಾವು ನಡೆದುಕೊಳ್ಳುತ್ತಿದ್ದೇವೆ. ಎಲ್ಲಾ ನ್ಯಾಯಾಲಯಗಳಿಗಿಂತಲೂ ಆತ್ಮಸಾಕ್ಷಿಯ ನ್ಯಾಯಾಲಯ ದೊಡ್ಡದು. ಸತ್ಯಕ್ಕೆ ಎಂದಿಗೂ ನ್ಯಾಯ ಸಿಗುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು(ಗುರುವಾರ) ಮೈಸೂರು ದಸರಾ ಉದ್ಘಾಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಚುನಾಯಿತ ಸರ್ಕಾರವನ್ನು ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ. ರಾಜ್ಯದ ಜನರ ಆಶೀರ್ವಾದದಿಂದ ನಾವು 136 ಸ್ಥಾನ ಗೆದ್ದಿದ್ದೇವೆ. 5 ವರ್ಷಗಳ ಅಭಿವೃದ್ಧಿ ಕೆಲಸ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ. ದೇವರಾಜ ಅರಸು ಬಿಟ್ಟರೆ ಸಿಎಂ ಆಗಿ 5 ವರ್ಷ ಪೂರೈಸಿದ್ದು ಸಿದ್ದರಾಮಯ್ಯ ಮಾತ್ರ ಎಂದು ಹೇಳಿರುವ ಜಿಟಿ ದೇವೇಗೌಡ ಮುಡಾದ ಸದಸ್ಯರಾಗಿದ್ದರು, ಅವರಿಗೆ ಸತ್ಯ ಗೊತ್ತಿದೆ. ಅದಕ್ಕೇ ಅವರು ಇಂದು ಬೇರೆ ಪಕ್ಷದಲ್ಲಿದ್ದುಕೊಂಡು ಸತ್ಯವನ್ನೇ ಹೇಳುವ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಜನರ ಆಶೀರ್ವಾದ ಇರುವವರೆಗೂ ಯಾರು ಏನೂ ಮಾಡಲು ಸಾಧ್ಯವಿಲ್ಲ. ಜನರು, ಚಾಮುಂಡಿ ಆಶೀರ್ವಾದಿಂದ 2ನೇ ಬಾರಿ ಸಿಎಂ ಆಗಿದ್ದೇನೆ, ಸತ್ಯಕ್ಕೆ ಯಾವಾಗಲೂ ಜಯ ದೊರಕುತ್ತದೆ, ಈ ರಾಜ್ಯದ ಜನತೆಯ ಪ್ರೀತಿ, ಆಶೀರ್ವಾದ ಇರುವವರೆಗೆ ಯಾರು ಏನೂ ಮಾಡಲು ಸಾಧ್ಯವಿಲ್ಲ ಎಂದವರು ಹೇಳಿದ್ದಾರೆ.

ಮೈಸೂರು ದಸರಾ ರೋಮಾಂಚನ : ಸಿದ್ದರಾಮಯ್ಯ
ಮೈಸೂರು ದಸರಾ ಅಂದರೆ ಒಂದು ರೀತಿ ರೋಮಾಂಚನ ಮತ್ತು ಹರ್ಷ. ಕಳೆದ ಬಾರಿ ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡಿದ್ದೆವು. ಈ ಬಾರಿ ಅದ್ದೂರಿಯಾಗಿ ನಾಡಹಬ್ಬವಾಗಿ ಮೈಸೂರು ದಸರಾ ಆಚರಣೆಗೆ ನಿರ್ಧಾರ ಮಾಡುತ್ತಿದ್ದೇವೆ. ಈ ಬಾರಿ ರಾಜ್ಯದಲ್ಲಿ ಶೇ 98.99ರಷ್ಟು ಬಿತ್ತನೆ ಕಾರ್ಯ ಆಗಿದೆ. ನಮ್ಮ ನಿರೀಕ್ಷೆಗಿಂತ ಹೆಚ್ಚು ಬೆಳೆ ಬೆಳೆಯಲೆಂದು ಪ್ರಾರ್ಥನೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ವರ್ಷ ಸಾಕಷ್ಟು ಮಳೆಯಾಗಿದೆ. ಎಲ್ಲ ನದಿಗಳು, ಜಲಾಶಯಗಳು ಬಹುತೇಕ ತುಂಬಿವೆ. ಮಳೆ ಬೆಳೆ ಸರಿಯಾಗಿ ಆದರೆ ಮಾತ್ರ ಜನರು ಸುಖ ಶಾಂತಿ ನೆಮ್ಮದಿಯಿಂದ ಬಾಳಲು ಸಾಧ್ಯ. ರೈತರ ಮುಖದಲ್ಲಿ ಮಂದಹಾಸ ಕಾಣಲು ಸಾಧ್ಯ, ಸಾಮಾನ್ಯ ಜನತೆಗೆ ಸಂತೋಷ ಜೀವನ ಸಿಗಲಿ ಎಂದು ಚಾಮುಂಡಿ ದೇವಿಯನ್ನು ಪ್ರಾರ್ಥಿಸಿದ್ದೇನೆ ಎಂದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!