Tuesday, October 22, 2024

ಸಿದ್ದರಾಮಯ್ಯ ರಾಜೀನಾಮೆ ಕೇಳುವವರಿಗೆ ಚಾಮುಂಡೇಶ್ವರಿ ಬುದ್ಧಿ ನೀಡಲಿ : ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅಚ್ಚರಿಯ ಹೇಳಿಕೆ

ಜನಪ್ರತಿನಿಧಿ (ಮೈಸೂರು) : ಜೆಡಿಎಸ್ ಶಾಸಕ ಜಿಟಿ ದೇವೇಗೌಡ  ತಮ್ಮ ಸ್ವಂತ ಕ್ಷೇತ್ರದಲ್ಲಿ ನಿಂತು ಸಿಎಂ ಸಿದ್ದರಾಮಯ್ಯ ಪರವಾಗಿ ಮಾತನಾಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಲ್ಲದೆ, ಸ್ವಪಕ್ಷ ಜೆಡಿಎಸ್​​ಗೇ ಟಾಂಗ್ ನೀಡಿ ಅವರು ಮಾತನಾಡಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಟಿ ದೇವೇಗೌಡ   ಅವರು, ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂದು ವಾದಿಸುತ್ತಾ ಹೋದರೆ ರಾಜ್ಯದಲ್ಲಿ ಎಲ್ಲ ರಾಜಕೀಯ ನಾಯಕರೂ ರಾಜೀನಾಮೆ ನೀಡಬೇಕಾದೀತು. ಹಾಗೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳುವವರಿಗೆ ತಾಯಿ ಚಾಮುಂಡೇಶ್ವರಿ ಒಳ್ಳೆಯ ಬುದ್ಧಿ ನೀಡಲಿ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.

ಕುಮಾರಸ್ವಾಮಿಯೇ ರಾಜೀನಾಮೆ ಕೊಟ್ಟಿಲ್ಲ: ಜಿಟಿಡಿ
ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅದೇ ರೀತಿ ಸಿದ್ದರಾಮಯ್ಯ ಸಹ ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದಿದ್ದಲ್ಲದೇ, ಕುಮಾರಸ್ವಾಮಿ ಹಾಗೂ ಬಿಜೆಪಿ ಮುಖಂಡರ ವಿರುದ್ಧ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್​ ವಾಪಸ್​ ಕೊಟ್ಟಿದ್ದಾರಲ್ಲಾ? ಮುಡಾ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ಎಲ್ಲದಕ್ಕೂ ಸಹ ಸಿಎಂ ಸಿದ್ದರಾಮಯ್ಯ ಕಾರಣ ಅಲ್ಲ. ಕಾನೂನುಬದ್ಧವಾಗಿ 50:50 ಅನುಪಾತದಲ್ಲಿ ಸೈಟ್​ ಹಂಚಿಕೆ ಮಾಡಲಾಗಿದೆ. ಎಫ್​ಐಆರ್​ ದಾಖಲಾಗಿದೆ ಎಂದ ಮಾತ್ರಕ್ಕೆ ರಾಜೀನಾಮೆ ನೀಡಬೇಕೆಂಬ ಅಗತ್ಯವಿಲ್ಲ ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!