spot_img
Wednesday, April 1, 2026
spot_img

ಪರಿಷತ್‌ ಉಪ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

ಜನಪ್ರತಿನಿಧಿ (ಮಂಗಳೂರು) : ವಿಧಾನ ಪರಿಷತ್‌ ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಿನ್ನೆ(ಬುಧವಾರ)ಯಷ್ಟೇ ಆಯ್ಕೆಗೊಂಡಿದ್ದ ಎಸ್.ರಾಜು ಪೂಜಾರಿ ಅವರು ಇಂದು (ಗುರುವಾರ) ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್‌ ಡಿಸೋಜಾ ಕಾಂಗ್ರೆಸ್‌ ಮುಖಂಡರಾದ ರಮಾನಾಥ್‌ ರೈ, ಜಯಪ್ರಕಾಶ್‌ ಹೆಗ್ಡೆ ಸೇರಿ ಪ್ರಮುಖರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಯ ಬಳಿಕ ವರದಿಗಾರರಿಗೆ ಪ್ರತಿಕ್ರಿಯಿಸಿ ಮಾತನಾಡಿದ ರಾಜು ಪೂಜಾರಿ, ಸ್ಥಳೀಯ ಸಂಸ್ಥೆಗಳ ಬಗ್ಗೆ ಅರಿವಿದೆ. ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ಪಂಚಾಯತ್‌ ರಾಜ್‌ ವ್ಯವಸ್ಥೆಯ ಬಗ್ಗೆ ನನಗಿರುವ ಅರಿವಿನ ಬಗ್ಗೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ತಿಳಿದಿದೆ. ಹಾಗಾಗಿ ಮತದಾರರು ನನ್ನನ್ನು ಬೆಂಬಲಿಸುವ ಪೂರ್ಣ ವಿಶ್ವಾಸವಿದೆ ಎಂದು ಅವರು ಹೇಳಿದರು.

ಮೂವತ್ತು ವರ್ಷಗಳಿಂದ ಕಾಂಗ್ರೆಸ್‌ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ ಅನುಭವವಿದೆ. ಪಕ್ಷದಲ್ಲಿ ನನ್ನ ಕಾರ್ಯವೈಖರಿ ಹಾಗೂ ಪಕ್ಷನಿಷ್ಠೆಯನ್ನು ಗುರುತಿಸಿ ಈ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಟಿಕೇಟ್‌ ನೀಡಿ ಅವಕಾಶ ಕೊಟ್ಟುದೆ ಎಂದವರು ಹೇಳಿದರು.

ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಕ್ಷೇತ್ರಕ್ಕೆ ಅ.21ರಂದು ಉಪ‌ ಚುನಾವಣೆ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!