spot_img
Wednesday, April 1, 2026
spot_img

ಮುಂದಿನ ಮೂರು ವರ್ಷಗಳಲ್ಲಿ ಫಿಲಂ ಸಿಟಿ ನಿರ್ಮಾಣ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು): ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿಯ 160 ಎಕರೆ ಪ್ರದೇಶದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಫಿಲಂ ಸಿಟಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಿಸಿದರು.

ದಸರಾ ಮಹೋತ್ಸವದ ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದೆ ಎಂದು ಹೇಳಿದರು.

ಚಿತ್ರರಂಗದ ಬೆಳವಣಿಗೆ ಸರ್ಕಾರ ಎಲ್ಲಾ ರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕೆಂದು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!