Thursday, November 14, 2024

ಹೆಚ್‌ ಡಿಕೆ ವಿರುದ್ಧ ಎಫ್‌ಐಆರ್‌ : ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದ್ದೇನು ?

ಜನಪ್ರತಿನಿಧಿ (ಬೆಂಗಳೂರು) : ಉದ್ಯಮಿ ವಿಜಯ್ ಟಾಟಾ ಎಂಬವರು ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಈ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ವರದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು, ನಿಷ್ಪಕ್ಷಪಾತವಾದ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪೊಲೀಸ್‌ ಸಿಬ್ಬಂದಿಗೆ ಎಚ್ಚರಿಕೆ :
ಇನ್ನು, ವರ್ಗಾವಣೆ ವಿಚಾರವಾಗಿ ಪೊಲೀಸ್ ಸಿಬ್ಬಂದಿಗೆ ಕಮಿಷನರ್​ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಆಡುಗೋಡಿ ಸಿಎಆರ್ ಮೈದಾನದಲ್ಲಿ ನಡೆದ ಮಾಸಿಕ ಸೇವಾ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರ್ಗಾವಣೆ ವಿಚಾರವಾಗಿ ಸಾಕಷ್ಟು ಸಿಬ್ಬಂದಿ ಕಚೇರಿಗೆ ಬರುತ್ತಿದ್ದಾರೆ. ಸರಿಯಾದ ಸಮಯದಲ್ಲಿ ನಾವೇ ವರ್ಗಾವಣೆ ಮಾಡುತ್ತೇವೆ. ಪ್ರತಿದಿನ‌ ಸಿಬ್ಬಂದಿ ಬರುವುದರಿಂದ ಇದೇ ಕೆಲಸವಾಗಿಬಿಡುತ್ತದೆ. ಇದನ್ನು ಪೊಲೀಸ್​ ಸಿಬ್ಬಂದಿ ಗಂಭೀರವಾಗಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!