spot_img
Thursday, April 2, 2026
spot_img

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ

ಕೊಲ್ಲೂರು, ಅ.4: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶುಕ್ರವಾರ ದೇವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕರಾದ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಶ್ರೀಮತಿ ಧನಾಕ್ಷಿ, ಶ್ರೀಮತಿ ಸುಧಾ ಕೆ, ಕೆ. ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ. ವಿ, ಯು. ರಾಜೇಶ್ ಕಾರಂತ್, ರಘುರಾಮ ದೇವಾಡಿಗ ಉಪಸ್ಥಿತರಿದ್ದರು.

ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಾಬು ಶೆಟ್ಟಿ ಅವರು ಈ ಹಿಂದೆ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿಯೂ ಕೂಡಾ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!