spot_img
Sunday, February 15, 2026
spot_img

ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಆರಂಭ

ಕುಂದಾಪುರ: ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಗುರುವಾರ ಆರಂಭಗೊಂಡಿತು. ಪ್ರತಿದಿನವೂ ಚಂಡಿಕಾ ಹೋಮ ನಡೆಯುತ್ತಿದೆ. ನವರಾತ್ರಿಯ ಸಂದರ್ಭದಲ್ಲಿ ಆಭರಣ ಸಹಿತ ಸರ್ವಾಂಕಾರ ಪೂಜೆ, ಅಷ್ಟೋತ್ತರ ಕುಂಕುಮಾರ್ಚನೆ, ಉಡಿ ತುಂಬುವುದು, ದುರ್ಗಾಸಹಸ್ರನಾಮ ಅರ್ಚನೆ, ನವರಾತ್ರಿ ಕಲ್ಪೋಕ್ತ ಪೂಜೆ, ನವರಾತ್ರಿ ವಿಶೇಷ ಪೂಜೆ, ಸರ್ವ ಸೇವೆ, ಪರಮಾನ್ನ ಸೇವೆ, ಚಂಡಿಕಾ ಪಾರಾಯಣ, ಪಂಚಾಮೃತ ಸೇವೆ, ಸಾಮೂಹಿಕ ಸಪ್ತಶತಿ ಪಾರಾಯಣ, ಪಂಚಾರತಿ ಸೇವೆ ಮೊದಲಾದ ಸೇವೆಗಳು ನಡೆಯುತ್ತಿವೆ. ಶರನ್ನವರಾತ್ರಿಯ ಶುಭವರಸದಲ್ಲಿ ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಇದರ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ, ಗಣೇಶ ಮೆಂಡನ್ ಮುಂಬಯಿ, ಎನ್.ಡಿ ಚಂದನ್, ಕೃಷ್ಣಮೂರ್ತಿ ನಾಯ್ಕ್ ಮುಂಬಯಿ, ರಾಘವೇಂದ್ರ ಚಂದನ್ ಮುಂಬಯಿ, ಎಂ.ಎಂ.ಸುವರ್ಣ, ಎಂ.ಆರ್ ನಾಯ್ಕ್, ಸಂತೋಷ್ ಶೆಟ್ಟಿ ಬಗ್ವಾಡಿ, ನಿವೃತ್ತ ಮುಖ್ಯೋಪಾಧ್ಯಾಯರಾದ ರಾಜೀವ ಶೆಟ್ಟಿ ಬಗ್ವಾಡಿ, ಆನಂದ ಕೆ.ನಾಯ್ಕ್, ನಾಗೇಶ ಪಿ.ಕಾಂಚನ್, ದಿನೇಶ ಕಾಂಚನ್, ಪ್ರಭಾಕರ ಸೇನಾಪುರ, ಶ್ಯಾಮಲ ಜಿ.ಚಂದನ್, ರಾಜೀವ ಸೌರಭ, ಶೋಭಾ ಪುತ್ರನ್, ವಾಸು ಜಿ.ನಾಯ್ಕ್, ಕ್ಷೇತ್ರದ ಪ್ರಧಾನ ಅರ್ಚಕರು,ಮಹಾಜನ ಸಂಘದ ಪದಾಧಿಕಾರಿಗಳು, ಯುವ ಸಂಘಟನೆಯ ಪದಾಧಿಕಾರಿಗಳು, ಮೊಗವೀರ ಸ್ತ್ರೀ ಶಕ್ತಿ ಸದಸ್ಯರು ಉಪಸ್ಥಿತರಿದ್ದರು.

ಚಂಡಿಕಾ ಹೋಮದ ಸೇವಾರ್ಥಿಗಳು, ಹೂವಿನ ಅಲಂಕಾರ ಮಾಡಿದ ಸೇವಾರ್ಥಿಗಳನ್ನು ಗೌರವಿಸಲಾಯಿತು.

ಶ್ರೀಮಹಿಷಾಸುರಮರ್ದಿನಿ ಭಜನಾ ತಂಡದ ಸದಸ್ಯರು, ಶ್ರೀ ಮಾತಾ ಭಜನಾ ಮಂಡಳಿ ಹಕ್ರೆಮಠ ಕೊಡೇರಿ ಇಲ್ಲಿನ ಭಜನಾ ತಂಡದವರು ಭಾಗವಹಿಸಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!