spot_img
Wednesday, January 22, 2025
spot_img

ಶಾಸಕ ಮುನಿರತ್ನಗೆ ಮತ್ತೆ ಸಂಕಷ್ಟ | 14 ದಿನ ನ್ಯಾಯಾಂಗ ಬಂಧನ

ಜನಪ್ರತಿನಿಧಿ (ಬೆಂಗಳೂರು) : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು(ಅಕ್ಟೋಬರ್ 05) ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುನಿರತ್ನಗೆ 14 ದಿನ(ಅಕ್ಟೋಬರ್ 19ರ ವರೆಗೆ) ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಬಿಜೆಪಿ ಶಾಸಕ ಮುನಿರತ್ನ ಎಸ್​ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನೆಲೆ ಎಸ್​ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್​, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್​​ಗೆ ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್​ ಸೂಚಿಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟ್​ನಲ್ಲಿ ಅರ್ಜಿ ಹಾಕಿ ಎಂದು ಹೇಳಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!