spot_img
Thursday, April 2, 2026
spot_img

ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ಪ್ರತಿದಿನ ತಲಾ 300 ಚಾರಣಿಗರಿಗೆ ಮಾತ್ರ ಅವಕಾಶ !

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ಪ್ರತಿದಿನ ತಲಾ 300 ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. https://aranyavihaara.karnataka.gov.in/ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಮೂಲಕ ಚಾರಣ ಪಥಗಳ ಟಿಕೆಟ್‌ ಕಾಯ್ದಿರಿಸಲು ಅರಣ್ಯ ವಿಹಾರ ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಒಂದು ಚಾರಣ ಪಥಕ್ಕೆ ನಿರ್ದಿಷ್ಟ ದಿನ ಟಿಕೆಟ್‌ ಸಿಗದವರು ಬೇರೆ ಚಾರಣ ಪಥವನ್ನು ಆಯ್ಕೆ ಮಾಡಿಕೊಳ್ಳಬಹುದು. ಒಂದು ದೂರವಾಣಿ ಸಂಖ್ಯೆಯ ಮೂಲಕ 10 ಟಿಕೆಟ್‌ಗಳನ್ನು ಮುಂಗಡವಾಗಿ ಕಾಯ್ದಿರಿಸಲು ಅವಕಾಶವಿದೆ. ಮುಂಗಡ ಕಾಯ್ದಿರಿಸಿದವರು ಏಳು ದಿನಗಳ ಮೊದಲು ರದ್ದು ಮಾಡಿದರೆ ನೀವು ಪಾವತಿಸಿದ ಪೂರ್ತಿ ಹಣ ನಿಮಗೆ ಸಿಗಲಿದೆ.

ಅರಣ್ಯ ವಿಹಾರ ವೆಬ್‌ಸೈಟ್‌ ಮೂಲಕ ಈಗ 5 ತಾಣಗಳಿಗೆ ಟಿಕೆಟ್‌ ಕಾಯ್ದಿರಿಸಬಹುದಾಗಿದ್ದು, ಈ ತಿಂಗಳ ಕೊನೆಯೊಳಗೆ 40 ಚಾರಣಪಥಗಳನ್ನು ಸೇರಿಸಲಾಗುವುದು. ವನ್ಯಜೀವಿ ಸಫಾರಿ ಮತ್ತು ಬೋಟ್‌ ಸಫಾರಿಗೂ ಇದರಲ್ಲೇ ಟಿಕೆಟ್‌ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗುವುದು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!