spot_img
Wednesday, April 1, 2026
spot_img

ಕೆಪಿಎಸ್‌ಸಿ ಯಡವಟ್ಟುಗಳಿಗೆ ಕಡಿವಾಣ ಹಾಕಲಿ, ನೇಮಕಾತಿ ಪರೀಕ್ಷೆಗಳ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮವಹಿಸಲಿ : ವಿಜಯೇಂದ್ರ ಒತ್ತಾಯ

ಜನಪ್ರತಿನಿಧಿ (ಬೆಂಗಳೂರು) : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೆಪಿಎಸ್‌ಸಿ ಪರೀಕ್ಷೆಯ ಗೊಂದಲಗಳು ಕೊನೆಗಾಣುವಂತೆ ಕಾಣುತ್ತಿಲ್ಲ. ಇತ್ತೀಚೆಗಷ್ಟೇ ಪ್ರಶ್ನೆ ಪತ್ರಿಕೆಯ ನ್ಯೂನತೆ ಬಯಲಾದ ಬೆನ್ನಲ್ಲೇ ಮತ್ತೆ ಮರು ಪರೀಕ್ಷೆಗೆ ಆದೇಶ ಹೊರಡಿಸಿ ಸಾವಿರಾರು ಪರೀಕ್ಷಾರ್ಥಿಗಳ ಶಾಪಕ್ಕೆ ಗುರಿಯಾಗಿದ್ದ ಸರ್ಕಾರ ಈ ಹಿಂದೆ ನಡೆದ ಪರೀಕ್ಷೆ ರದ್ದು ಪಡಿಸಿರುವ ಕುರಿತು ಯಾವುದೇ ಆದೇಶ ಹೊರಡಿಸದೆ, ಮರುಪರೀಕ್ಷೆ ನಿಗದಿ ಪಡಿಸಿ ಮತ್ತೊಂದು ಪ್ರಮಾದ ಎಸಗಲು ಮುಂದಾಗಿರುವುದು ದುರ್ದೈವದ ಸಂಗತಿ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಆಕ್ರೋಶ ಹೊರಹಾಕಿದ್ದಾರೆ.

ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಉದ್ಯೋಗಾಕಾಂಕ್ಷಿಗಳನ್ನು ಪದೇ ಪದೇ ಸಂಕಷ್ಟಕ್ಕೆ ತಳ್ಳುತ್ತಿರುವುದು ಖಂಡನೀಯ. ನಾಡಿನ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ತಾಳ್ಮೆ ಹಾಗೂ ಸಹನೆ ಕಳೆದುಕೊಳ್ಳುವ ಮುನ್ನ ಕೆಪಿಎಸ್ಸಿ ಯಡವಟ್ಟುಗಳಿಗೆ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳು ಸೂಕ್ತ ರೀತಿಯಲ್ಲಿ ನಡೆಸಲು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!