Tuesday, October 22, 2024

ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ : ಗೋಕಾಕ್ ಚಳವಳಿ: ಹಿನ್ನೋಟ-ಮುನ್ನೋಟ” ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ ಎಲ್ಲವೂ ಕನ್ನಡಮಯವಾಗಲಿ. ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ. ಕನ್ನಡ ಅಗ್ರ ಭಾಷೆಯಾಗಲಿ, ಕನ್ನಡ ಮೊದಲ ಭಾಷೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರವು “ಕರ್ನಾಟಕ ಸುವರ್ಣ ಸಂಭ್ರಮ 50ರ ಅಂಗವಾಗಿ ಆಯೋಜಿಸಿದ್ದ ಗೋಕಾಕ್ ಚಳವಳಿ: ಹಿನ್ನೋಟ-ಮುನ್ನೋಟ” ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಗೋಕಾಕ್ ಚಳವಳಿಯ ಪರಿಣಾಮ ರಾಜ್ಯದಲ್ಲಿ ಕನ್ನಡದ ವಾತಾವರಣ ವಿಸ್ತರಿಸಲು ಕನ್ನಡ ಕಾವಲು ಸಮಿತಿಯನ್ನು ರಚಿಸಲಾಯಿತು. ಬಳಿಕ ಇದೇ ಸಮಿತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯಿತು. ಪ್ರತಿಯೊಂದು ಭಾಷೆಯನ್ನೂ ಕಲಿಯಿರಿ, ಆದರೆ ಆಡಳಿತ ಭಾಷೆ ಕನ್ನಡ ಆಗಿರಲಿ ಎಂದು ಹೇಳಿದರು.

ಕನ್ನಡ ನೆಲದಲ್ಲಿ ನಡೆದ ಕನ್ನಡ ಭಾಷಾ ಚಳವಳಿ ಅತ್ಯಂತ ಚಾರಿತ್ರಿಕವಾದದ್ದು. ನಾನು ಕಾವಲು ಸಮಿತಿ ಅಧ್ಯಕ್ಷನಾಗಿದ್ದಾಗ ಇಂಗ್ಲಿಷ್ ಟೈಪ್ ರೈಟರ್ ಗಳನ್ನು ಕಿತ್ತುಕೊಂಡು ಕನ್ನಡ ಟೈಪ್ ರೈಟರ್ ಗಳನ್ನು ಕೊಡ್ತಿದ್ದೆ. ಎಲ್ಲಾ ಭಾಷೆಗಳ ಬಗ್ಗೆ ಗೌರವ ಇರಲಿ, ಎಷ್ಟು ಭಾಷೆಗಳನ್ನಾದರೂ ಕಲಿಯಿರಿ ಆದರೆ ಈ ನೆಲದ ಭಾಷೆ ಕನ್ನಡವನ್ನು ಬಿಟ್ಟು ಕೊಡುವಷ್ಟು ದಾರಾಳತನ ಬೇಡ ಎಂದರು.

ಇಂದು ಕನ್ನಡದ ಹಿರಿಯ ಚಳವಳಿಗಾರರನ್ನು, ಗೋಕಾಕ್ ಹೋರಾಟಗಾರರನ್ನು ಸನ್ಮಾನಿಸಿದ್ದು ಅತ್ಯಂತ ಖುಷಿ ಕೊಟ್ಟಿದೆ. ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಶರಣ ಪ್ರಕಾಶ್ ಪಾಟೀಲ್, ಬೋಸರಾಜು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಸೇರಿ ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರು, ಕನ್ನಡ ಚಳವಳಿಗಾರರು, ಹೋರಾಟಗಾರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!