spot_img
Thursday, April 2, 2026
spot_img

ಇನ್ನೆರಡು ದಿನಗಳಲ್ಲಿ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ : ಹೆಬ್ಬಾಳ್ಕರ್‌

ಜನಪ್ರತಿನಿಧಿ (ಬೆಂಗಳೂರು) : ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಅತಿ ಹೆಚ್ಚು ತಾಂತ್ರಿಕ ದೋಷ ಎದುರಿಸಿದ ಯೋಜನೆ ಗೃಹಲಕ್ಷ್ಮೀ. ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ಮಾತು ಕೊಟ್ಟಂತೆ ಮನೆಯ ಯಜಮಾನಿಗೆ ಪ್ರತಿ ತಿಂಗಳೂ ಎರಡು ಸಾವಿರ ಹಣ ನೀಡುತ್ತಿದ್ದರೂ ಪ್ರತಿ ಬಾರಿ ವಿಳಂಬವಾಗುತ್ತಲೆ ಬಂದಿದೆ. ಇಲಾಖೆಯ ಸಚಿವರು ಇದಕ್ಕೆ ಸಂಬಂಧಿಸಿದಂತೆ ಸಮಜಾಯಿಸಿ ಕೊಡುತ್ತಲೇ ಬಂದಿದ್ದಾರೆ. ಆದಾಗ್ಯೂ, ಈ ಯೋಜನೆ ಫಲಾನುಭವಿಗಳಲ್ಲಿ ಈ ಯೋಜನೆಯ ಸರಿಯಾದ ನಿರ್ವಹಣೆಯಲ್ಲಿ ಪ್ರತಿ ಬಾರಿ ರಾಜ್ಯ ಸರ್ಕಾರ ದೋಷ ಎದುರಿಸುತ್ತಿರುವುದರ ಬಗ್ಗೆ ನಿರಾಸೆ ಮೂಡಿದೆ. ಪ್ರತಿಪಕ್ಷಗಳ ಟೀಕೆಗೂ ಇದು ಕಾರಣವಾಗಿದೆ.

ಜುಲೈ ಮತ್ತು ಆಗಸ್ಟ್‌ ತಿಂಗಳ ಹಣವನ್ನು ಎರಡು ತಿಂಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಹೌದು, ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್‌ ತಿಂಗಳ ಹಣವನ್ನು ಎರಡು ಕಂತಿನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್‌ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!