spot_img
Sunday, February 15, 2026
spot_img

ಗಂಗೊಳ್ಳಿ ಇದರ ಶ್ರೀ ಶಾರದಾ ಮಹೋತ್ಸವದ ಸುವರ್ಣ ಮಹೋತ್ಸವ :ಅಹೋರಾತ್ರಿ ಭಜನಾ ಕಾರ್ಯಕ್ರಮ

ಗಂಗೊಳ್ಳಿ : ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಶ್ರೀ ಶಾರದಾ ಮಹೋತ್ಸವದ ಸುವರ್ಣ ಮಹೋತ್ಸವ ಸಮಾರಂಭದ ಅಂಗವಾಗಿ ಅಹೋರಾತ್ರಿ ಭಜನಾ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶುಕ್ರವಾರ ನಡೆಯಿತು.

ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಸತೀಶ ಜಿ. ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತಿನ್ ಖಾರ್ವಿ, ಮಹಿಳಾ ಮಂಡಳಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ, ಕಾರ್ಯದರ್ಶಿ ಸುಜಾತಾ ಬಾಬು ಖಾರ್ವಿ, ನಾಗೇಶ ಖಾರ್ವಿ, ನಾಗರಾಜ ಖಾರ್ವಿ, ಬಿ.ಪ್ರಕಾಶ ಶೆಣೈ, ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಮಹಿಳಾ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಶನಿವಾರ ಬೆಳಿಗ್ಗೆ ಅಹೋರಾತ್ರಿ ಭಜನಾ ಕಾರ್ಯಕ್ರಮದ ಮಂಗಲೋತ್ಸವ ನಡೆಯಿತು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ಭಜನಾ ತಂಡಗಳು ಭಜನಾ ಸೇವೆಯನ್ನು ಸಮರ್ಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!