spot_img
Friday, April 25, 2025
spot_img

ಸಾಮಾಜಿಕವಾಗಿ ಬೇಕಾಗಿರುವುದು ‘ಚಾಯ್‌ ಪೇ ಚರ್ಚಾ’ದಂತಹ ಬೀಡಾಡಿ ಚರ್ಚೆಗಳಲ್ಲ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು/ನವ ದೆಹಲಿ) : ರಾಹುಲ್‌ ಗಾಂಧಿ ದಲಿತರ ಮನೆಯಲ್ಲಿ ಅಡುಗೆ ಮಾಡಿ ಸವಿದ ರಾಹುಲ್‌ ಗಾಂಧಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ದಲಿತರ ಊಟದೆಡೆಗೆ ಅವಜ್ಞೆಯಷ್ಟೇ ಅಲ್ಲ, ತೀವ್ರ ಅಸಹನೆಯನ್ನೂ ಬೆಳೆಸಿಕೊಂಡಿರುವ ಸಮಾಜ ನಮ್ಮದು. ದಲಿತರ ಕೈಯಿಂದ ತಯಾರಿಸಿದ ಅಡುಗೆಯ ಸೇವನೆ ಇರಲಿ, ಅವರು ಊಟಕ್ಕೆ ಬಳಸುವ ಪಾತ್ರೆ ಮುಟ್ಟಿದರೂ ಅದನ್ನು ಮೈಲಿಗೆ ಎಂದು ಕರೆಯುವ ಮನಸ್ಥಿತಿ ಇಂದಿಗೂ ನಮ್ಮಲ್ಲಿ ವ್ಯಾಪಕವಾಗಿದೆ ಎಂದು ಸಿಎಂ ಬರೆದುಕೊಂಡಿದ್ದಾರೆ.

ಶಾಲೆಗಳಲ್ಲಿ ದಲಿತ ಸಮುದಾಯದವರು ಅಡುಗೆ ಮಾಡಿದರೆ ಅದನ್ನು ವಿರೋಧಿಸುವುದು, ಜಾತ್ರೆ, ದೇವಸ್ಥಾನಗಳ ಅಡುಗೆಯ ಉಸ್ತುವಾರಿಯಿಂದ ದಲಿತರನ್ನು ಪ್ರಜ್ಞಾಪೂರ್ವಕವಾಗಿ ಕೈ ಬಿಡುವುದು ಅಥವಾ ದೂರವಿರಿಸುವುದು ಇವೆಲ್ಲವನ್ನು ನಮ್ಮ ಸಮಾಜದಿಂದ ಇಂದಿಗೂ ತೊಡೆಯಲಾಗಿಲ್ಲ ಎಂದು ಅವರು ವಿಷಾದ ವ್ಯಕ್ತ ಪಡಿಸಿದ್ದಾರೆ.

ಆಹಾರವೆನ್ನುವುದು ಅವರವರ ರುಚಿ, ಇಚ್ಛೆಗೆ ಅನುಸಾರವಾಗಿಯೇ ಇರುವುದಾದರೂ, ತಳ ಸಮುದಾಯಗಳ ಆಹಾರ ಸಂಸ್ಕೃತಿಯನ್ನು ಕೀಳಾಗಿ ಕಾಣುವ ಕೊಳಕು ಮನಸ್ಥಿತಿಯನ್ನು ಬೇರು ಸಹಿತ ಕಿತ್ತು ಹಾಕದೆ ದೇಶದಲ್ಲಿ ನೈಜ ಸಾಂಸ್ಕೃತಿಕ ಸಮ್ಮಿಳನ ಸಾಧ್ಯವಾಗದು ಎಂದಿದ್ದಾರೆ.

ಮಹಾರಾಷ್ಟ್ರದ ಮರಾಠವಾಡದ ದಲಿತ ಆಹಾರ ಸಂಸ್ಕೃತಿಯನ್ನು ಕಟ್ಟಿಕೊಟ್ಟಿರುವ ಲೇಖಕ ಶಾಹೂ ಪಟೋಲೆ ಅವರೊಂದಿಗೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿಯವರು ಅಡುಗೆ ತಯ್ಯಾರಿಯಲ್ಲಿ ಭಾಗಿಯಾಗಿ, ಊಟದೊಟ್ಟಿಗೆ ನಡೆಸಿದ ಆಹಾರ ಸಂಸ್ಕೃತಿಯ ಚರ್ಚೆ ಅವರು ತಯಾರಿಸಿದ ಆಹಾರಾದಷ್ಟೇ ಚೇತೋಹಾರಿಯಾಗಿದೆ ಎಂದೂ ಹೇಳಿದ್ದಾರೆ.

ಇಂದು ನಮಗೆ ಸಾಮಾಜಿಕವಾಗಿ ಬೇಕಾಗಿರುವುದು ‘ಚಾಯ್‌ ಪೇ ಚರ್ಚಾ’ದಂತಹ ಬೀಡಾಡಿ ಚರ್ಚೆಗಳಲ್ಲ, ನಮ್ಮೆಲ್ಲರನ್ನು ಬೆಸೆಯುವಂತಹ, ಚಿಂತನೆಗೆ ಹಚ್ಚುವಂತಹ ಆಹಾರ ಸಂಸ್ಕೃತಿಯಂತಹ ಮೌಲಿಕ ಚರ್ಚೆಗಳು. ರಾಹುಲ್‌ ಗಾಂಧಿಯವರು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿರುವ ಈ ವಿಡಿಯೋ ತುಣುಕನ್ನು ನಿಮ್ಮೊಟ್ಟಿಗೆ ಹಂಚಿಕೊಳ್ಳುವ ಖುಷಿ ನನ್ನದು ಎಂದು ಸಿಎಂ ರಾಹುಲ್‌ ಗಾಂಧಿ ದಲಿತರ ಮನೆಯಲ್ಲಿ ಅಡುಗೆ ಮಾಡಿ ಸವಿದು, ಅವರೊಂದಿಗೆ ಚರ್ಚೆ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

https://www.facebook.com/share/v/mJNLUME1wQRdZbBj/

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!