Thursday, November 14, 2024

ಗ್ರಾಮ ಆಡಳಿತಾಧಿಕಾರಿಗಳ ಸಮಸ್ಯೆಯನ್ನು ಯಾರೊಬ್ಬರೂ ಆಲಿಸದಿರುವುದು ದುರಾದೃಷ್ಟಕರ : ವಿಜಯೇಂದ್ರ

ಜನಪ್ರತಿನಿಧಿ (ಬೆಂಗಳೂರು) : ಸ್ವತಃ ಮುಖ್ಯಮಂತ್ರಿಗಳ ಮುಡಾ ಹರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಸೇರಿದಂತೆ ನಿರಂತರ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಯಾವೊಂದು ಸಮಸ್ಯೆಗಳು ಕೇಳಿಸುತ್ತಿಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ಹೊರ ಹಾಕಿದ್ದಾರೆ.

ವಿವಿಧ ಬೇಡಿಕೆಗ: ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತ್‌ಗಳ ಅಧಿಕಾರಿಗಳು, ನೌಕರರು ಹಾಗೂ ಸದಸ್ಯರಯ ಆರಂಭಿಸಿರುವ ಅನಿರ್ದಿಷ್ಠಾವಧಿ ಮುಷ್ಕರ ಸೋಮವಾರದಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮುಂದುವರಿದಿದೆ. ಪರಿಣಾಮವಾಗಿ ಮೂರನೇ ದಿನವೂ ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಆಡಳಿತ ಸ್ತಬ್ಧವಾಗಿದೆ. ಈ ಸಂಬಂಧಿಸಿದಂತೆ ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಮುಂದುವರಿದು ಮೂರನೇ ದಿನಕ್ಕೆ ಕಾಲಿಟ್ಟಿದ್ದು ರಾಜ್ಯ ಸರ್ಕಾರದ ಯಾರೊಬ್ಬರೂ ಈ ಸಂಬಂಧ ಸಮಸ್ಯೆ ಆಲಿಸದಿರುವುದು ದುರಾದೃಷ್ಟಕರ ಸಂಗತಿ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!