spot_img
Wednesday, April 1, 2026
spot_img

ಬಿಲ್ಲಾಡಿ: ವಕ್ವಾಡಿ ವಿಠಲ ಶೆಟ್ಟಿ ಅವರ ಮನೆಗೆ “ಸ್ವಾತಂತ್ರ್ಯ ಹೋರಾಟಗಾರರ ಮನೆ” ನಾಮಫಲಕ ಅನಾವರಣ

ಬ್ರಹ್ಮಾವರ: ‘ಸ್ವರಾಜ್ಯ 75’ ತಂಡದ 32ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾರ್ಯಕ್ರಮ, ಜೊತೆಯಾದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇ.ಸಿ.ಆರ್ ಕಾಲೇಜು ಅಚ್ಲಾಡಿ, ಹಸ್ತ ಚಿತ್ರ ಫೌಂಡೇಶನ್ ರಿಂದ ವಕ್ವಾಡಿ,ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ,ಉಸಿರು ಕೋಟ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಘಟಕ, ಬಿಲ್ಲಾಡಿ ಯುವ ವೇದಿಕೆ ಬಿಲ್ಲಾಡಿ ಕಾರ್ಯಕ್ರಮ ನಮ್ಮೊಂದಿಗೆ (“ಸ್ವರಾಜ್ಯ 75 ತಂಡದೊಂದಿಗೆ) ಯಶಸ್ವಿಗೊಳಿಸಲಾಯಿತು.

ಕಾರ್ಯಕ್ರಮದ ಮೊದಲಿಗೆ ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆಯನ್ನು ಸತೀಶ್ ವಡ್ಡರ್ಸೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುಂದಾಪ್ರ ಕನ್ನಡದ ರಾಯಭಾರಿ ಮನು ಹಂದಾಡಿ ನಾಮಫಲಕ ಅನಾವರಣ ಮಾಡಿದರು.

ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕರಾವಳಿಗರ ಕೊಡುಗೆಯೊಂದಿಗೆ ವಕ್ವಾಡಿ ವಿಠಲ ಶೆಟ್ಟಿ ಸ್ವಾತಂತ್ರ್ಯ ಹೋರಾಟದ ವಿಚಾರವನ್ನು ಉಪನ್ಯಾಸಕ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಪ್ರಸ್ತುತಪಡಿಸಿದರು.

ರಾಘವ ಮೆಂಡನ್ ಬಿಲ್ಲಾಡಿ, ನರಸಿಂಹ ವಿ. ಶೆಟ್ಟಿ, ನರೇಂದ್ರ ಕುಮಾರ್ ಕೋಟ, ದೀಪಾ, ಶ್ರೀನಿಧಿ ಹೆಗ್ಡೆ, ವಿಜಯ್ ನರಸಿಂಹ ಐತಾಳ್, ಸುಮತಿ ಶೆಡ್ತಿ ಅನುಭವ ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ವಹಿಸಿದ್ದರು.
ಪ್ರವೀಣ್ ಶೆಟ್ಟಿ ವಂಡಾರು, ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳು, ಬಿಲ್ಲಾಡಿ ಯುವ ವೇದಿಕೆ ಬಿಲ್ಲಾಡಿ, ಕುಟುಂಬಸ್ಥರು, ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.

ಪ್ರಾಸ್ತಾವಿಕ ವಿಚಾರವನ್ನು ಕಾರ್ಯಕ್ರಮ ಸಂಚಾಲಕರಾದ (ಸ್ವರಾಜ್ಯ 75) ಪ್ರದೀಪ ಕುಮಾರ್ ಬಸ್ರೂರು ವಿಚಾರ ರೂಪುರೇಷ ತಿಳಿಸಿದರು. ಅನ್ವಿತಾ ನಾಯ್ಕ ಕುಮಟಾ ಕಾರ್ಯಕ್ರಮ ನಿರ್ವಹಿಸಿ ವಂದನಾ ಹೆಚ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!