spot_img
Wednesday, April 1, 2026
spot_img

ಕುಂದಾಪುರ ತಾಲೂಕು: ನಿರ್ದೇಶಕರ ಚುನಾವಣಾ ವೇಳಾಪಟ್ಟಿ ಪ್ರಕಟ

ಕುಂದಾಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕುಂದಾಪುರ ತಾಲೂಕಿಗೆ ಸಂಬಂಧಿಸಿದಂತೆ 2024-2029 ನೇ ಅವಧಿಗೆ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಸ್ಪರ್ಧಿಸಬಯಸುವ ಕುಂದಾಪುರ ತಾಲೂಕಿನ ಸರ್ಕಾರಿ ನೌಕರರು ತಮ್ಮ ನಾಮಪತ್ರಗಳನ್ನು ಅಕ್ಟೋಬರ್ 9 ರಿಂದ 18 ರ ವರೆಗೆ ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಚುನಾವಣಾಧಿಕಾರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತಾಲೂಕು ಶಾಖೆ, ಕುಂದಾಪುರ ಕಚೇರಿಯಲ್ಲಿ ಪಡೆದು, ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.

ನಾಮಪತ್ರಗಳ ಪರಿಶೀಲನೆ ಹಾಗೂ ಅರ್ಹ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವ ದಿನಾಂಕ ಅ. 19, ಉಮೇದುವಾರಿಕೆಯನ್ನು ಹಿಂಪಡೆಯಲು ಅ. 21 ಕೊನೆಯ ದಿನವಾಗಿದ್ದು, ಚುನಾವಣೆಯು ಅ. 28 ರಂದು ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ಸಂಘದ ಸಭಾಭವನ ಮತ್ತು ಕಾರ್ಯಾಲಯದಲ್ಲಿ ಹಾಗೂ ಮತಗಳ ಎಣಿಕೆಯು ಮತದಾನದ ಮುಕ್ತಾಯದ ನಂತರ ನಡೆಯಲಿದೆ ಎಂದು ಕುಂದಾಪುರ ಶಾಖೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!